ಹಾಸನ

ಕ್ಷಮೆ ಕೇಳದಿದ್ದರೆ ಕೈ ಬಹಿಷ್ಕಾರ

Published On :

ಹಾಸನ: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕಬ್ಬಿಗೆ ಬೆಂಬಲ ನೀಡುವಂತೆ ಆಗ್ರಹಿಸಿ ವಿಷ ಸೇವಿಸಿ ಸಾವನ್ನಪ್ಪಿದ ರೈತ ವಿಠಲ್ ಅರಬಾವಿ ಸಾವು ಸಹಜವಾದದ್ದು ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರೈತ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗುತ್ತಾ ಕ್ಷಮೆಯಾಚಿಸಬೇಕು. ಇಲ್ಲದಿದ್ದರೇ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹಿಷ್ಕಾರದ ಎಚ್ಚರಿಕೆ ನೀಡಿದರು.
ನಾಚಿಕೆಗೇಡು: ಕಬ್ಬಿಗೆ ಸೂಕ್ತ ಬೆಂಬಲ ನೀಡದ ಸರ್ಕಾರದ ವಿರುದ್ಧ ರೈತರು ಬೆಳಗಾವಿ ಸುವರ್ಣ ಸೌಧದ ಎದುರು ಮೂರು ಅಹೋರಾತ್ರಿ ಪ್ರತಿಭಟನೆ ನಡೆಸಿದರು. ಸರ್ಕಾರದ ಸ್ಪಂದಿಸದೆ ಇದ್ದ ಸಂದರ್ಭದಲ್ಲಿ ಬೇಸತ್ತ ರೈತ ವಿಠಲ್ ಅರಬಾವಿ ಸಾವಿರಾರು ರೈತರ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಈ ರೈತ ಮದ್ಯ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿರುವುದು ನಾಚಿಗೇಡಿನ ಸಂಗತಿ ಎಂದರು.
ಮುಖ್ಯಮಂತ್ರಿಗಳು ಈ ಕೂಡಲೇ ಕ್ಷಮೆ ಕೇಳದಿದ್ದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದಂತೆ ರೈತ ಸಮುದಾಯಗಳಿಗೆ ಸೂಚನೆ ನೀಡಲಾಗುವುದು ಹಾಗೂ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ರೈತ ಮುಖಂಡರಾದ ಅನೆಕೆರೆ ರವಿ, ಹೊನ್ನಾವರ ಸಿದ್ದಪ್ಪ, ವಿಜಯ ಕುಮಾರ್, ಬಾಬು, ಕೆಂಪಮ್ಮ, ಹೊನ್ನೇಗೌಡ, ಶಿವನಂಜೇಗೌಡ, ಶಾಂತಪ್ಪ, ಪುಟ್ಟಸ್ವಾಮಿ, ಹರಿಹರ, ಮಲ್ಲೇಶಪ್ಪ ಹಾಗೂ ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.