ಆಟೋ ಗುರುತಿಗೆ ಮತ ನೀಡಿ: ಪಕ್ಷೇತರ ಅಭ್ಯರ್ಥಿ ಜಗದೀಶ್
ಹಾಸನ: ಮತದಾರರು ಆಟೋ ಗುರುತಿನ ಸ್ವತಂತ್ರ ಅಭ್ಯರ್ಥಿಯಾದ ನನಗೆ ಮತಗಳನ್ನು ನೀಡಿ ಗೆಲುವು ಸಾಧಿಸಲು ಸಹಕರಿಸುವಂತೆ ಅಭ್ಯರ್ಥಿ ಟಿ.ಡಿ. ಜಗದೀಶ್ ಮನವಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೂ ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜಿಲ್ಲಾ ಕೇಂದ್ರವಾದ ಹಾಸನದಲ್ಲಿ ಸರಿಯಾದ ರಸ್ತೆಗಳು ಇಲ್ಲ. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಕಸ ವಿಲೇವಾರಿ ಆಗದೇ ಜನತೆ ಮೂಗು ಮುಚ್ಚಿಕೊಂಡು ತಿರುಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಳಚರಂಡಿ ವ್ಯವಸ್ಥೆ ವೈಜ್ಞಾನಿಕವಾಗಿ ಮಾಡದೆ ಬೇಜವಾಬ್ದಾರಿ ಕೆಲಸ ಸೇರಿದಂತೆ ನಾನಾ ಸಮಸ್ಯೆ ಎದುರಿಸಲಾಗುತ್ತಿದೆ.
ಸಮಸ್ಯೆಗಳ ಸರಮಾಲೆ: ಸರ್ಕಾರಿ ಆಸ್ಪೆತ್ರೆ ರೋಗಗ್ರಸ್ತವಾಗಿದೆ. ಮೆಡಿಕಲ್ ಕಾಲೇಜ್ ಇದ್ದರೂ ಸರಿಯಾದ ವೈದ್ಯರು ಇಲ್ಲದೆ ರೋಗಿಗಳು ನರಳುತ್ತಿದ್ದಾರೆ. ಹಲವಾರು ಕಾಲೇಜುಗಳು, ಪ್ರಾಥಮಿಕ ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಿಲ್ಲದೆ ಶಾಲೆಗಳನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ದಶಕಗಳ ರಾಜಕೀಯ ವೈಷಮ್ಯದಿಂದಾಗಿದುದ್ದ ರಸ್ತೆ ದುರಸ್ತಿ ಆಗದೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

