'ದೇಶಾದ್ಯಂತ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿ'
ಹೊಳೆನರಸೀಪುರ: ಇಡೀ ದೇಶದಲ್ಲಿ ಕಾಂಗ್ರೆಸ್ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟು, ತೃತೀಯ ರಂಗ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದ್ದು, ಬಿಜೆಪಿ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ ಎಂದು ಜೆಡಿಎಸ್ ನಾಯಕ ಹಾಗೂ ಶಾಸಕ ಎಚ್.ಡಿ. ರೇವಣ್ಣ ಇಲ್ಲಿ ಭವಿಷ್ಯ ನುಡಿದರು.
ತಾಲೂಕಿನ ಮೂಡಲಹಿಪ್ಪೆ ಗ್ರಾಮದಲ್ಲಿನ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ತಮ್ಮ ಪತ್ನಿ ಭವಾನಿ ಹಾಗೂ ಅಪಾರ ಬೆಂಬಲಿಗರೊಂದಿಗೆ ಇತ್ತೀಚೆಗೆ ಪೂಜೆ ಸಲ್ಲಿಸಿ, ಲೋಕಸಭಾ ಚುನಾವಣೆಗಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪರ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು.
ಕೇಂದ್ರದಲ್ಲಿ ತೃತೀಯ ರಂಗ ಅಧಿಕಾರಕ್ಕೆ ಬಂದಲ್ಲಿ ರಾಜಕೀಯವಾಗಿ ನೀವು ಬೆಳೆಸಿದ ದೇವೇಗೌಡರು ಮತ್ತೊಮ್ಮೆ ಈ ದೇಶದ ಪ್ರಧಾನಿ ಹುದ್ದೆಗೇರುವ ಸಂಭವವಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
ವಿಳಂಬ ಅನುಸರಿಸುತ್ತಿವೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರುದ್ದೇಶಪೂರಿತ ರಾಜಕಾರಣಕ್ಕೆ ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಗಳು ಬಲಿಯಾಗಿವೆ. ಜಿಲ್ಲೆಯಲ್ಲಿನ ಶಾಶ್ವತ ನೀರಾವರಿ ಯೋಜನೆಗಳಲ್ಲದೇ, ಹಾಸನ-ಬೆಂಗಳೂರು ನಡುವಿನ ರೈಲು ಮಾರ್ಗವು ದೇವೇಗೌಡರ ಕನಸಿನ ಕೂಸಾದ ಕಾರಣ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಈ ಯೋಜನೆ ಪೂರ್ಣಗೊಂಡಲ್ಲಿ ಆ ಕೀರ್ತಿ ದೇವೇಗೌಡರಿಗೆ ಸಲ್ಲುತ್ತದೆ ಎನ್ನುವ ಕಾರಣಕ್ಕಾಗಿಯೇ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಶಾಸಕ ಎಚ್.ಡಿ. ರೇವಣ್ಣ ಇಲ್ಲಿ ದೂರಿದರು.
ಪ್ರಚಾರ ಭಾಷಣಕ್ಕೂ ಮುನ್ನ ಶಾಸಕ ಎಚ್.ಡಿ. ರೇವಣ್ಣ ಅವರು ಮೂಡಲಹಿಪ್ಪೆ ಗ್ರಾಮದಲ್ಲಿನ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಟಿ. ಮಲ್ಲೇಶ್, ಟಿ. ಶಿವಕುಮಾರ್, ತಾಪಂ ಸದಸ್ಯ ಕೆ.ಕೆ. ಲೋಕೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎ. ರಘು, ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ್, ವಳಂಬಿಗೆ ವೆಂಕಟರಾಮು ಇತರರು ಇದ್ದರು.
ಭವಾನಿ ಮನವಿ
ಭವಾನಿ ರೇವಣ್ಣ ಮಾತನಾಡಿ, ರಾಜ್ಯ ಹಾಗೂ ದೇಶದಲ್ಲಿನ ರೈತರ ಪರವಾಗಿ ನಿರಂತರ ಹೋರಾಟ ನಡೆಸುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಗೆಲುವು ನೀಡುವ ಮೂಲಕ ದೇಶದಲ್ಲಿನ ರೈತರ ಪರವಾದ ದನಿಯಾಗಿ ಸಂಸತ್ತಿನಲ್ಲಿ ಗಟ್ಟಿಯಾಗಿ ದನಿಯೆತ್ತಲು ಗೌಡರಿಗೆ ಆಶೀರ್ವದಿಸಿ ಗೆಲುವು ನೀಡುವಂತೆ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

