ಹಾಸನ

ಟೀ ಎಸ್ಟೇಟ್ ಕಾರ್ಮಿಕರಿಗೆ ಪ್ರತಿಜ್ಞಾ ವಿಧಿ

Published On :

ಸಕಲೇಶಪುರ: ತಾಲೂಕಿನ ಕಾಡುಮನೆ ಟೀ ಎಸ್ಟೇಟಿನಲ್ಲಿ ಕಾರ್ಮಿಕರಿಗೆ ಇತ್ತೀಚೆಗೆ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಹಾಸನ ಉಪವಿಭಾಗದ ಕಾರ್ಮಿಕ ಅಧಿಕಾರಿ ಕೆ.ಎನ್. ಪ್ರಹ್ಲಾದ ಹಾಗೂ ಕಾರ್ಮಿಕ ನಿರೀಕ್ಷಕ ವಿಜಯ್ ಕುಮಾರ್ ಅವರು ಕಾಡುಮನೆ ಟೀ ತೋಟಕ್ಕೆ  ಭೇಟಿ ನೀಡಿ ಆಡಳಿತವರ್ಗದವರ ಸಹಕಾರದಿಂದ 520 ಮಂದಿ ಮಹಿಳಾ ಕಾರ್ಮಿಕರಿಗೆ ಹಾಗೂ 32 ಮಂದಿ ಪುರುಷ ಕಾರ್ಮಿಕರಿಗೆ ಒಟ್ಟು 552 ಕಾರ್ಮಿಕರಿಗೆ ಭಾರತದ ಚುನಾವಣಾ ಆಯೋಗ ಪ್ರಕಟಿಸಿರುವ ಕರಪತ್ರಗಳನ್ನು ವಿತರಿಸಿದರು. ಏ. 17ರಂದು ನಡೆಯುವ ಲೋಕಸಭಾ ಚುನಾವಣೆಗೆ ಮತದಾನ ಮಾಡುವಂತೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಅಲ್ಲದೇ, ಮತದಾನದ ಮಹತ್ವದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.