'ವಾಲ್ಮೀಕಿ ಸಮಾವೇಶವಲ್ಲ, ಜೆಡಿಎಸ್ ಸಮಾರಂಭ'
ಹಾಸನ: ಇತ್ತೀಚೆಗಷ್ಟೆ ನಡೆದ ಎಸ್ಸಿಎಸ್ಟಿ ಜೆಡಿಎಸ್ ಸಮಾವೇಶವನ್ನು ವಾಲ್ಮೀಕಿ ಸಮಾವೇಶ ಎಂದು ಮಹಾಂತೇಶ್ ಅವರು ಜನರಿಗೆ ಸುಳ್ಳು ಹೇಳಿದ್ದಾರೆ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಚೆಲುವನ ಶೇಖರಪ್ಪ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಂತೇಶ್ ಅವರು ಸುಳ್ಳು ಹೇಳುವ ಮೂಲಕ ವಾಲ್ಮೀಕಿ ಸಮಾಜವನ್ನು ಸ್ವಾರ್ಥಕ್ಕಾಗಿ ಬಳಸುತ್ತಿದ್ದಾರೆ.
ಅವರು ಈಗಾಗಲೇ ಸಂಘಕ್ಕೆ ರಾಜೀನಾಮೆ ನೀಡಿದ್ದು, ಚುನಾವಣೆ ಬಂದಾಗ ಪತ್ರಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರು ಮೂಲತಃ ಚಿತ್ರದುರ್ಗದವರಾಗಿದ್ದು, ಹಿಂದೆ ವಾಲ್ಮೀಕಿ ಆಚರಣೆಯ ಲೆಕ್ಕಪತ್ರಗಳನ್ನು ನೀಡಿಲ್ಲ ಎಂದು ಆರೋಪಿಸಿದರು. ವಾಲ್ಮೀಕಿ ಸಮುದಾಯಕ್ಕೆ ಸಿದ್ದರಾಮಯ್ಯ ಅವರು ಸಾಲ ಮನ್ನ ಮತ್ತು ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನಿಗದಿ, ಗುತ್ತಿಗೆಯಲ್ಲೂ ಮೀಸಲು ನೀಡಿದ್ದು, ಇನ್ನು ಅನೇಕ ಕಾರ್ಯಕ್ರಮ ನೀಡಿದ್ದಾರೆ. ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಹೋರಾಡುತ್ತಿದ್ದಾರೆ. ಇವರ ಕೈಗಳನ್ನು ಬಲಪಡಿಸಲು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಎ. ಮಂಜು ಅವರನ್ನು ಬೆಂಬಲಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಪ್ರಕಾಶ್, ತಿಮ್ಮಯ್ಯ, ರಂಗನಾಯಕ, ಬಸವನಾಯಕ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

