'ಕೈ'ಗೆ 20 ಸ್ಥಾನ ಖಚಿತ: ರೇವಣ್ಣ
ಹಾಸನ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ರಿಂದ 22 ಸೀಟುಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ನೀಡಿರುವ ಜನಪರ ಯೋಜನೆಗಳಿಂದ ರಾಜ್ಯದಲ್ಲಿ ಜನತೆ ಕಾಂಗ್ರೆಸ್ನತ್ತ ಒಲವು ತೋರಿದ್ದಾರೆ. ಅಲ್ಲದೆ, ಕೆಲವು ಕಡೆ ಕಾಂಗ್ರೆಸ್ಗೆ ಉತ್ತಮ ಪ್ರತಿಕ್ರಿಯೆ ಮೂಡಿ ಬರುತ್ತಿದೆ ಎಂದರು. ಹಾಸನದಲ್ಲಿ ಈ ಬಾರಿ ಕಾಂಗ್ರೆಸ್- ಜೆಡಿಎಸ್ ನಡುವೆ ಹೋರಾಟ ನಡೆಯಲಿದ್ದು, ಜಿಲ್ಲೆಯ ಜನತೆ ಬದಲಾವಣೆ ಬಯಸಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಗೆಲ್ಲಿಸಲು ಜಿಲ್ಲೆಯ ಜನತೆ ತೀರ್ಮಾನಿಸಿದ್ದಾರೆ. ಎಲ್ಲಾ ಕಡೆಗಳಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದರು. ಜಾಫರ್ ಎಲ್ಲೂ ಹೋಗಲ್ಲ: ಜಾಫರ್ ಶರೀಫ್ ಕಾಂಗ್ರೆಸ್ ಬಿಟ್ಟಿ ಎಲ್ಲೂ ಹೋಗೋಲ್ಲ. ನಮ್ಮ ಜೊತೆಗೆ ನಿಲ್ಲಲಿದ್ದಾರೆ. ಕಾಂಗ್ರೆಸ್ನಿಂದ ಅಲ್ಪಸಂಖ್ಯಾತರಿಗೆ ಯಾವುದೇ ಅನ್ಯಾಯವಾಗಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

