ಹಾಸನ

ಹೊಳೆನರಸೀಪುರದಲ್ಲಿ ಮತದಾನ ಜಾಗೃತಿ ಜಾಥಾ

Published On :

ಹಾಸನ: ಹೊಳೆನರಸೀಪುರದ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ, ಮತ್ತು ಸಹಾಯಕ ಚುನಾವಣಾದಿಕಾರಿ ನೇತೃತ್ವದಲ್ಲಿ ಇತ್ತೀಚೆಗೆ ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು, ಇಲ್ಲಿನ ಕಾಲೇಜು ಆವರಣದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಿದರು.  ಬ್ಯಾನರ್ ಪ್ರದರ್ಶನ ಹಾಗೂ ಕರಪತ್ರ ವಿತರಿಸಿ ಮತದಾನದ ಮಹತ್ವದ ಬಗ್ಗೆ ಚುನಾವಣಾ ಆಯೋಗ ಒದಗಿಸಿರುವ ಘೋಷಣೆಗಳೊಂದಿಗೆ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು. ಪಟ್ಟಣದ ಪ್ರಮುಖ ಸ್ಥಳವಾದ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು. ತಾಲೂಕಿನ ಸಹಾಯಕ ಚುನಾವಣಾಧಿಕಾರಿ ಸುಜ್ಞಾನಮೂರ್ತಿ, ತಹಸೀಲ್ದಾರ್ ರಾಘವೇಂದ್ರ, ಸ್ವೀಪ್ ಸಮಿತಿ ತಾಲೂಕು ನೋಡಲ್ ಅಧಿಕಾರಿ ನರಸಿಂಹಯ್ಯ, ತಾಪಂ ಅಧಿಕಾರಿ ತಮ್ಮಣ್ಣಗೌಡ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.