ದೇವೇಗೌಡರ ಪರ ಜಮೀರ್ ಪ್ರಚಾರ
ಚನ್ನರಾಯಪಟ್ಟಣ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪರ ಜೆಡಿಎಸ್ ಮುಖಂಡ, ಶಾಸಕ ಜಮೀರ್ ಅಹಮದ್ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಜೆಡಿಎಸ್ ಅಲ್ಪಸಂಖ್ಯಾತ ವಿಭಾಗ ರಾಜ್ಯಾಧ್ಯಕ್ಷ ಶಕಿಲ್ ನವಾಜ್, ಶಾಸಕ ಸಿ.ಎನ್. ಬಾಲಕೃಷ್ಣ, ತಾಲೂಕು ಅಧ್ಯಕ್ಷ ಪರಮ ದೇವರಾಜೇಗೌಡ ಸೇರಿದಂತೆ ಮತ್ತಿತತರೆ ಸ್ಥಳೀಯ ಮುಖಂಡರ ಜತೆ ಬಾಗೂರು ರಸ್ತೆಯಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡು ಮಸೀದಿಗೆ ತೆರಳಿ ಮುಸ್ಲಿಂ ಸಮುದಾಯಕ್ಕೆ ಜೆಡಿಎಸ್ ಬೆಂಬಲಿಸುವಂತೆ ಕೋರಿದರು.
ಇದೇ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಜಮೀರ್, ಮಾಜಿ ಪ್ರಧಾನಿ ದೇವೇಗೌಡರಿಗೆ ಮುಸ್ಲಿಂ ಸಮುದಾಯ ಕಂಡರೆ ಅಪಾರ ಪ್ರೀತಿಯಿದ್ದು, ಅವರು ಸಮುದಾಯದ ಸಮಸ್ಯೆಗಳನ್ನು ಬಗೆಹರಿಸುವತ್ತಾ ಮುಂದಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮಾವೇಶ ನಡೆಸುವ ಮೂಲಕ ಈ ವರ್ಗದ ಸಮಸ್ಯೆ ಬಗೆ ಹರಿಸಲು ಮುಂದಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಇಬ್ರಾಹಿಂ, ರೋಷನ್ಬೇಗ್ ಮತ್ತಿತರರು ಕಾಂಗ್ರೆಸ್ನಲ್ಲಿ ನಾಯಕರಾಗಲಿಲ್ಲ ಅವರನ್ನು ನಾಯಕರಾಗಿ ಸೃಷ್ಟಿ ಮಾಡಿದ್ದೇ ದೇವೇಗೌಡರು. ಅವರು ಪಕ್ಷಾಂತರ ಮಾಡಿ ಕಾಂಗ್ರೆಸ್ನಲ್ಲಿ ನಾಯಕರೆಂದು ಹೇಳಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಅಜೀಜ್ ಸೇಠ್ ಒಬ್ಬರೇ ನಾಯಕರಾಗಿದ್ದರು. ಕಾಂಗ್ರೆಸ್ ಅವರಿಗೆ ಕೊನೆಯಲ್ಲಿ ಯಾವ ಕಾಣಿಕೆ ನೀಡಿತೆಂದು ಎಲ್ಲರಿಗೂ ತಿಳಿದಿದೆ ಎಂದು ವ್ಯಂಗ್ಯವಾಡಿದರು.
ತಾನು ಹಾಸನ ಜಿಲ್ಲೆಗೆ ಪ್ರಚಾರಕ್ಕೆ ತೆರಳುತ್ತಿದ್ದೇನೆ ಎಂದ ಸಂದರ್ಭದಲ್ಲಿ ಜಿಲ್ಲೆಯ ಮುಸ್ಲಿಂ ಸಮಾಜದಲ್ಲಿ ತಮ್ಮ ಬಗ್ಗೆ ಸೋದರ ಭಾವನೆ ಇದೆ. ಅವರು ಎಂದಿಗೂ ತಮ್ಮನ್ನು ಕೈ ಬಿಡುವುದಿಲ್ಲ. ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಆದರೂ ಅವರ ಋಣಿಯಾಗಿರುವುದರಿಂದ ಅವರ ಪರ ಪ್ರಚಾರಕ್ಕಾಗಿ ಬಂದಿದ್ದೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

