ಫಲಿತಾಂಶ ಬಂದ ನಂತರ 'ಕೈ' ಬಾಯಿ ಬಂದ್: ಜಮೀರ್
ಹೊಳೆನರಸೀಪುರ: ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರ ಬಾಯಿಗೆ ಈ ಚುನಾವಣೆಯ ಫಲಿತಾಂಶ ಹೊರಬಿದ್ದ ಮೇಲೆ ಬೀಗ ಬೀಳಲಿದೆ ಎಂದು ಜೆಡಿಎಸ್ ಮುಖಂಡ ಜಮೀರ್ ಅಹಮದ್ ಇಲ್ಲಿ ತಿರುಗೇಟು ನೀಡಿದರು.
ಹಾಸನ, ಚನ್ನರಾಯಪಟ್ಟಣ, ಅರಕಲಗೂಡು ಹಾಗೂ ಹೊಳೆನರಸೀಪುರ ಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಭಾನುವಾರ ಪ್ರಚಾರ ನಡೆಸಲು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಗೆಲವು ಶತಸಿದ್ದ ಎಂದರು.
ಜಮೀರ್ ಅಹಮದ್ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಜೆಡಿಎಸ್ ಮುಸ್ಲಿಂ ಕಾರ್ಯಕರ್ತರು ಗಾಂಧಿ ವೃತ್ತದಲ್ಲಿ ಆದರದಿಂದ ಸ್ವಾಗತಿಸಿದರು.
ಪಟ್ಟಣದ ಗಾಂಧಿ ವೃತ್ತಕ್ಕೆ ಆಗಮಿಸುತ್ತಿದಂತೆ ಜಮೀರ್ ಆಹಮದ್ ಅವರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

