ಬೆಂಕಿ ಆಕಸ್ಮಿಕ: ಹುಲ್ಲಿನ ಮೆದೆ ಭಸ್ಮ
ಅರಸೀಕೆರೆ: ತಾಲೂಕಿನ ಬಾಣಾವರ ಹೋಬಳಿಯ ಕೊಂಡವಾಗಿಲು ಗೊಲ್ಲರಹಟ್ಟಿ ಗ್ರಾಮದಲ್ಲಿ ಹುಲ್ಲಿನ ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರುಪಾಯಿ ಬೆಲೆ ಬಾಳುವ ಹುಲ್ಲು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಕೊಂಡವಾಗಿಲು ಗೊಲ್ಲರಹಟ್ಟಿ ಗ್ರಾಮದ ಗಂಗಾಧರಪ್ಪ, ಮರುಳಪ್ಪ ಮತ್ತು ರುದ್ರಪ್ಪ ಎಂಬುವರಿಗೆ ಸೇರಿದ 3 ಹುಲ್ಲಿನ ಮೆದೆಗಳಿಗೆ ಬೆಂಕಿ ತಗುಲಿ ಪೂರ್ಣ ಪ್ರಮಾಣದ ಹಾನಿ ಸಂಭವಿಸಿದೆ. ಘಟನೆ ತಿಳಿದ ಊರಿನ ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣವೇ ಅಗ್ನಿ ಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ. ವಾಹನ ಆಗಮಿಸುವ ವೇಳೆಗೆ ಹುಲ್ಲು ಸುಟ್ಟು ಕರಕಲಾಗಿತ್ತು, ಬರಗಾಲದ ನಡುವೆ ಈ ರೀತಿಯ ಘಟನೆ ನಡೆದಿರುವುದು ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವಂತೆ ಮಾಡಿದೆ. ಸಂತ್ರಸ್ತರಿಗೆ ಪರಿಹಾರ ನೀಡುವಂತೆ ತಾಲೂಕು ಆಡಳಿತವನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

