ಹಾಸನ

ಮತದಾನ ಪ್ರಕ್ರಿಯೆ ಮೇಲೆ ವಿಶೇಷ ನಿಗಾ

Published On :

ಹಾಸನ: ಲೋಕಸಭಾ ಚುನಾವಣೆಯಲ್ಲಿ ವೆಬ್ ಕ್ಯಾಸ್ಟಿಂಗ್ ಮೂಲಕ ಮತದಾನ ಪ್ರಕ್ರಿಯೆಯನ್ನು ಅಂತರ್‌ರ್ಜಾಲದಲ್ಲಿ ನೇರ ವೀಕ್ಷಿಸುವ ಮತ್ತು ಆ ಮೂಲಕ ಹಲವು ಮತಗಟ್ಟೆಗಳ ಮತದಾನ ಪ್ರಕ್ರಿಯೆ ಮೇಲೆ ವಿಶೇಷ ಮೇಲ್ವಿಚಾರಣೆ ಮಾಡಲಾಗುವುದು ಎಂದು ಎಂದು ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ವೆಬ್ ಕ್ಯಾಸ್ಟಿಂಗ್ ಅನುಷ್ಠಾನಕ್ಕಾಗಿ ಬಿಎಸ್‌ಎನ್‌ಎಲ್, ಎಂಟಿಎಸ್ ಸಂಸ್ಥೆಗಳ ಅಧಿಕಾರಿಗಳು, ಜಿಲ್ಲೆಯ ನಾನಾ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರ ಸಭೆ ನಡೆಸಿ ಮಾತನಾಡಿದ ಅವರು, ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ವೆಬ್ ಕ್ಯಾಸ್ಟಿಂಗ್ ಸೌಲಭ್ಯವನ್ನು ಇನ್ನಷ್ಟು ವ್ಯವಸ್ಥಿತವಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಬಿಎಸ್‌ಎನ್‌ಎಲ್ ಮತ್ತು ಎಂಟಿಎಸ್ ಸಂಸ್ಥೆಗಳು ಈಗಾಗಲೇ ಸುಮಾರು 500ಕ್ಕೂ ಅಧಿಕ ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ನಡೆಸಲು ಸಂಪರ್ಕ ಒದಗಿಸುವ ಭರವಸೆ ನೀಡಿವೆ. ಇದರ ನಿರ್ವಹಣೆಗಾಗಿ ಎಂಜಿನಿಯರಿಂಗ್ ಹಾಗೂ ಇತರ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ನೆರವು ಪಡೆಯಲು ತೀರ್ಮಾನಿಸಲಾಗಿದೆ. ಅವರಿಗೂ ಇದೊಂದು ವಿಭಿನ್ನ ಅನುಭವ ಮತ್ತು ಅಮೂಲ್ಯ ಅವಕಾಶವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ವೆಬ್ ಕ್ಯಾಸ್ಟಿಂಗ್ ಮತದಾನ ಪ್ರಕಿಯೆಯನ್ನು ಕ್ಯಾಮೆರಾ ಹಾಗೂ ಅಂತರ್ಜಾಲದ ನೆರವಿನಿಂದ ನೇರವಾಗಿ ವೀಕ್ಷಿಸಲು ಅನುಕೂಲವಾಗುವ ವ್ಯವಸ್ಥೆಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಬಳಿ ಇರುವ ಅಥವಾ ಚುನಾವಣಾ ಶಾಖೆಯಿಂದ ಒದಗಿಸುವ ಲ್ಯಾಪ್‌ಟ್ಯಾಪ್‌ಗಳನ್ನು ಮತದಾನ ಕೇಂದ್ರದಲ್ಲಿ ಸೂಕ ಜಾಗದಲ್ಲಿಟ್ಟು ಅಂತರ್ಜಾಲ ಸಂಪರ್ಕ ಚಾಲನೆ ಗೊಳಿಸುವ ಮತ್ತು ಮತದಾನ ಪ್ರಾರಂಭದಿಂದ ಮುಗಿಯುವವರಗೆ ಇದನ್ನು ನಿರ್ವಹಿಸುವ ಜವಾಬ್ದಾರಿ ಹೊರಬೇಕಿದೆ.
 ಇದೊಂದು ಸರಳ ಹಾಗೂ ಮಹತ್ವದ ಕೆಲಸವಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಲಾರದು ಎಂದು ಮನವರಿಕೆ ಮಾಡಿಕೊಟ್ಟರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.