ಹಾಸನ

ಕಾಂಗ್ರೆಸ್‌ಗೆ ಮರಳಿದ ಬನ್ನೂರು

Published On :

ಮೈಸೂರು: ಈ ಹಿಂದೆ ಇದ್ದ ಬನ್ನೂರು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿದ್ದ ಮಾಜಿ ಶಾಸಕ ಕೆ.ಮಾದೇಗೌಡ ಅವರು ರಾಜಕೀಯ ಸನ್ಯಾಸ ಸ್ವೀಕರಿಸಿದ್ದರು. ಬದಲಾದ ರಾಜಕೀಯ ವಿದ್ಯಮಾನದಿಂದ ಇದೀಗ ಮಾತೃ ಪಕ್ಷ ಕಾಂಗ್ರೆಸ್‌ಗೆ ಮರಳಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಮಾದೇಗೌಡರು, ಎರಡು ಬಾರಿ ಬನ್ನೂರು ಕ್ಷೇತ್ರದಿಂದ ಶಾಸಕನಾಗಿ ಗೆದ್ದು ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಕೆಲವು ದಶಕಗಳ ರಾಜಕೀಯ ವಿದ್ಯಮಾನಗಳನ್ನು ನೋಡಿ ರಾಜಕೀಯದಿಂದ ದೂರವಿದ್ದೆ. ಆದರೆ, 2014ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಜಿಲ್ಲೆಯವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡಲು ಪುನಃ ಪಕ್ಷಕ್ಕೆ ಮರಳಿದ್ದೇನೆ.
ನನ್ನ ತಮ್ಮ ಕೆ. ಮಹದೇವ್ ಕೂಡ ಪಕ್ಷದ ಪರವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಕೆ.ಮಹದೇವ್, ಮುಖಂಡರಾದ ವೈ.ಜೆ. ಪುಟ್ಟಪ್ಪ, ಶಶಿಕಲಾ ಜಯರಾಂ, ಎಂ.ರಾಜು, ಮಂಜೇಗೌಡ, ವೈ.ಆರ್. ಪ್ರಭಾಕರ್, ಬಿ.ಸಿ. ಮಾದೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.