ಬೇಲೂರು ಪುರಸಭೆ ಅಧ್ಯಕ್ಷರ ಮತಯಾಚನೆ
ಬೇಲೂರು: ಪಟ್ಟಣದಲ್ಲಿ ಭಾನುವಾರ ಪುರಸಭೆ ಅಧ್ಯಕ್ಷ ಹಾಗೂ ಸದಸ್ಯರು ಬೇಲೂರಿನ ಎಲ್ಲಾ 23 ವಾರ್ಡ್ಗಳಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪರವಾಗಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಪುರಸಭೆ ಅಧ್ಯಕ್ಷ ಬಿ. ಗಿರೀಶ, ದೇವೇಗೌಡರು ಹಾಸನ ಜಿಲ್ಲೆಗೆ ಮಾಡಿದ ಕೆಲಸ ಕಾರ್ಯಗಳು ಮನದಲ್ಲಿ ಇಟ್ಟುಕೊಂಡು ಈ ಬಾರಿ ಬೇಲೂರು ಪುರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಜೆಡಿಎಸ್ ಪರವಾಗಿ ಅತಿ ಹೆಚ್ಚಿನ ಮತಗಳನ್ನು ಪಡೆಯುತ್ತೇವೆಂದು ತಿಳಿಸಿದರು. ಪುರಸಭೆ ಸದಸ್ಯರಾದ ಶ್ರೀನಿಧಿ, ರವಿಅಣ್ಣೇಗೌಡ ಮತ್ತು ಮಂಜುನಾಥ್ ಮಾತನಾಡಿ, ಲೋಕಸಭಾ ಚುನಾವಣೆ ಮುಗಿದ ನಂತರ ಬೇಲೂರಿನ ಎಲ್ಲಾ ವಾರ್ಡ್ಗಳಿಗೂ ಕುಡಿಯುವ ನೀರು, ವಿದ್ಯುತ್ ದೀಪಗಳು, ಚರಂಡಿ, ಹಾಗೂ ಇನ್ನಿತರ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈಗ ಚುನಾವಣಾ ನೀತಿ ಸಂಹಿತೆ ಜಾರಿ ಇರುವುದರಿಂದ ಯಾವುದೇ ಕೆಲಸಗಳನ್ನು ಮಾಡಿಸುವ ಹಾಗಿಲ್ಲ ಎಂದು ವಿವರಿಸಿದರು.
ಈ ಬಾರಿ ನಡೆಯಲಿರುವ ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಎಲ್ಲಾ ಸೌಕರ್ಯಗಳನ್ನು ಪುರಸಭೆಯ ವತಿಯಿಂದ ಒದಗಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷೆ ಸಲ್ಮ ಅಕ್ತರಿ, ಪುರಸಭಾ ಸದಸ್ಯ ಮೋಹನ್ ಕುಮಾರ್ ಮತ್ತು ಮುಖಂಡ ವಿಷ್ಣುಕುಮಾರ್, ಕುಮಾರ್ ನಾಯಕ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

