ಹಾಸನ

ವೀರಶೈವರ ದುರ್ಬಳಕೆ: ಓಂಬೇಶ್

Published On :
ಹಾಸನ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ವೀರಶೈವರ ಮತಗಳನ್ನು ಗಳಿಸಲು ಓಲೈಕೆ ಮಾಡುವ ಮೂಲಕ ದುರ್ಬಳಕೆ ಮಾಡುತ್ತಿವೆ ಎಂದು ವೀರಶೈವ ಮುಖಂಡ ಎಚ್.ಆರ್. ಓಂಬೇಶ್ ಆರೋಪಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್  ಮತ್ತು ಜೆಡಿಎಸ್ ಮುಖಂಡರು ವೀರಶೈವ ಸಮುದಾಯದ ಬಗ್ಗೆ ಓಲೈಕೆಯ ಮಾತುಗಳನ್ನು ಆಡುತ್ತಿದ್ದಾರೆ. ಇದುವರೆಗೂ ಈ ಸಮಾಜದ ಶ್ರೇಯೋಭಿವೃದ್ಧಿಗೆ ಕೊಡುಗೆ ನೀಡದೆ, ಚುನಾವಣೆ ಸಂದರ್ಭದಲ್ಲಿ ಮಾತ್ರ ಮತ ಕೇಳಲು ಓಲೈಕೆಯ ಮಾತನ್ನು ಆಡುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಮುಖಂಡರು ವೀರಶೈವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ ಎಂದು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದು, ಇತಿಹಾಸದ ಅವಲೋಕನ ಮಾಡಿದಾಗ ಹಾಗೂ ಪ್ರಸ್ತುತ ದೇವೇಗೌಡರೊಬ್ಬರೇ ವೀರಶೈವ ವಿರೋಧಿಯಾಗಿಲ್ಲ. ಕಾಂಗ್ರೆಸ್‌ನವರೂ ವೀರಶೈವ ವಿರೋಧಿಯಾಗಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಮುಸಲ್ಮಾನರಿಗೆ ಮೋದಿಯನ್ನು ತೋರಿಸಿ ಹೆದರಿಸಿದರೆ, ಜಿಲ್ಲೆಯಲ್ಲಿ ದೇವೇಗೌಡರನ್ನು ತೋರಿಸಿ ಹೆದರಿಸುತ್ತಿದ್ದಾರೆ. ಆದರೆ, ವೀರಶೈವ ಸಮಾಜವು ರಾಷ್ಟ್ರಮಟ್ಟದಲ್ಲಿ ಮತ್ತು ಜಿಲ್ಲೆ ಒಳಗೆ ಹೆದರುವ ಅವಶ್ಯಕತೆ ಇಲ್ಲ ಎಂದ ಅವರು, ಈ ಬಾರಿ ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷಗಳ ಗೆಲುವು ಖಚಿತವಾಗಿದ್ದು, ದೇಶದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗುವುದು ಖಚಿತ ಎಂದು ಹೇಳಿದರು. 
ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ವೀರಶೈವ ಜನಾಂಗದವರು ಬೆಂಬಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವೀರಶೈವ ಮುಖಂಡ ಎನ್. ರವಿಕುಮಾರ್, ಷಡಾಕ್ಷರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.