ಸಾಲಗಾಮೆ ಹೋಬಳಿಯಲ್ಲಿ ಮತ ಜಾಗೃತಿ
Published On :
ಹಾಸನ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇತ್ತೀಚೆಗೆ ತಾಲೂಕಿನ ಸಾಲಗಾಮೆ ಹೋಬಳಿಯಲ್ಲಿ ಮತದಾರರ ಜಾಗೃತಿ ಕುರಿತ ಜಾಥಾಕ್ಕೆ ಹಾಸನ ತಾಲೂಕಿನ ಕಾಯಂ ನಿರ್ವಹಣಾಧಿಕಾರಿ ಎನ್.ವಿ. ಶಿವಪ್ಪ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸಂವಿಧಾನಾತ್ಮಕವಾಗಿ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ನಾಗರಿಕನೂ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.
ಈ ಜಾಗೃತಿ ಜಾಥಾವು ಸಾಲಗಾಮೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾರರಿಗೆ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಜಾಗೃತಿ ಜಾಥಾದಲ್ಲಿ ಹಾಸನದ ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್, ಹಾಸನ ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ್, ಸಾಲಗಾಮೆ ಪಿ.ಎಸ್.ಸಿ. ವೈದ್ಯಾಧಿಕಾರಿ ಅರುಣ್ ಕುಮಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಯ್ಯ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕೃಷ್ಣಪ್ಪ, ತಾಲೂಕು ನೋಡಲ್ ಅಧಿಕಾರಿ ಹಾಗೂ ಸಹಾಯಕ ಯೋಜನಾಧಿಕಾರಿ ಟಿ. ಶಿವಣ್ಣ, ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಲಿಂಗರಾಜು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ಸಾಲಗಾಮೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸ್ತ್ರೀ ಶಕ್ತಿ ಹಾಗೂ ಸ್ವಸಹಾಯ ಸಂಘದ ಸದಸ್ಯರು, ಪತ್ರಕರ್ತ ಸತ್ಯನಾರಾಯಣ, ಗ್ರಾಮ ಪಂಚಾಯ್ತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಸ್ವೀಪ್ ಸಮಿತಿ ವತಿಯಿಂದ ನಮ್ಮ ಮತ ಮಾರಾಟಕ್ಕಿಲ್ಲ ಎಂಬ ಬೀದಿ ನಾಟಕವನ್ನು ಏರ್ಪಡಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

