20 ಕ್ಷೇತ್ರದಲ್ಲಿ ಕೈ ಗೆಲವು ನಿಶ್ಚಿತ
Published On :
ಹಾಸನ: ರಾಜ್ಯದಲ್ಲಿ ದಲಿತರು ಕಾಂಗ್ರೆಸ್ ಪರವಾಗಿದ್ದು, ಕನಿಷ್ಠ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದೆ ಎಂದು ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 16 ಕ್ಷೇತ್ರದಲ್ಲಿ ಈಗಾಗಲೇ ಪ್ರವಾಸ ಮಾಡಿದ್ದು, ರಾಜ್ಯದ ದಲಿತರು ಕಾಂಗ್ರೆಸ್ ಪರವಾಗಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನಪರ ಆಡಳಿತ ಸಮಾಜದ ಕಟ್ಟ ಕಡೆಯ ಜನರಿಗೆ ತಲುಪಿರುವುದಿರಂದ ಜನತೆ ಕಾಂಗ್ರೆಸ್‌ನತ್ತ ಒಲವು ತೋರಿದ್ದಾರೆ. ಹಾಗಾಗಿ ಕನಿಷ್ಠ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದೆ ಎಂದು ಹೇಳಿದರು.
ಬಿಜೆಪಿ ಪ್ರಮುಖ ಪ್ರತಿಸ್ಪರ್ಧಿ: ಕಾಂಗ್ರೆಸ್ ಬಗ್ಗೆ ಪ್ರತಿಪಕ್ಷದಳು ದಾರಿ ತಪ್ಪಿಸುತ್ತಿವೆ ಎಂದ ನಾರಾಯಣಸ್ವಾಮಿ ಜೆಡಿಎಸ್ ಕೆಲವು ಕ್ಷೇತ್ರದಲ್ಲಿ ಸ್ಪರ್ಧಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್‌ಗೆ ಪ್ರತಿಸ್ಪರ್ಧಿಯಾಗಿದೆ. ದೇವೇಗೌಡರಿಗೆ ವಯಸ್ಸಾಗಿದ್ದು, ಚುರುಕಿನಿಂದ ಜನರ ಸಮಸ್ಯೆಗೆ ಸ್ಪಂದಿಸುವುದು ಕಷ್ಟ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ಅವರನ್ನು ಜಿಲ್ಲೆಯ ಜನ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಗೌಡ್ರು ಕಾರಣ: ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ತಪ್ಪಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೇ ಕಾರಣ. 2004ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗುವುದು ನಿಶ್ಚಿತವಾಗಿತ್ತು. ಅಂದು ಅನಿವಾರ್ಯವಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕಾದ ಸಂದರ್ಭ ಬಂದಾಗ ದೇವೇಗೌಡ, ಧರ್ಮಸಿಂಗ್ ಸಿಎಂ ಆದರೆ ಮಾತ್ರ ಸಹಕಾರ ನೀಡುವುದಾಗಿ ಹೇಳಿದ್ದರು. ಹಾಗಾಗಿ ಖರ್ಗೆ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿ ಹೋಯಿತು ಎಂದರು.
ಜೆಡಿಎಸ್‌ಗೆ ಜನಬೆಂಬಲವಿಲ್ಲ: 2013ರ ಚುನಾವಣೆಯಲ್ಲಿ ಗೆದ್ದಿದ್ದರೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮುಖ್ಯಮಂತ್ರಿ ಆಗುತ್ತಿದ್ದರು. ಆದರೆ, ಜೆಡಿಎಸ್ ನಡೆಸಿದ ಕುತಂತ್ರದಿಂದ ಪರಮೇಶ್ವರ್ ಸೋತರು. ಹೀಗೆ ಎರಡು ಬಾರಿ ದಲಿತರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದು ಜೆಡಿಎಸ್. ಆದ್ದರಿಂದ, ಈ ಚುನಾವಣೆಯಲ್ಲಿ ಒಂದೇ ಒಂದು ಕ್ಷೇತ್ರದಲ್ಲೂ ಜೆಡಿಎಸ್ ಗೆಲವು ಸಾಧಿಸುವುದಿಲ್ಲ ಎಂದು ಭವಿಷ್ಯ ನಡಿದರು. ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾದ ಕಾರ್ಯದರ್ಶಿ ಡಾ. ನವೀನ್, ಜಿಲ್ಲಾಧ್ಯಕ್ಷ ಪುಟ್ಟರಾಜು, ಡಿ.ಸಿ. ಸಣ್ಣಸ್ವಾಮಿ, ಧರ್ಮಯ್ಯ, ರೇಣುಕಾನಂದ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

