ಹಾಸನ

ಅಶ್ವಿನಿಗೆ 2 ಚಿನ್ನ ಪದಕ

Published On :
ಹೊಳೆನರಸೀಪುರ: ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಹಾಸನದ ಹೇಮಾಗಂಗೋತ್ರಿ ಅಧ್ಯಯನ ಕೇಂದ್ರದ ಹೊಳೆನರಸೀಪುರದ ವಿದ್ಯಾರ್ಥಿನಿ ಜಿ.ಆರ್.ಅಶ್ವಿನಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಎರಡು ಚಿನ್ನದ ಪದಕ ಗಳನ್ನು ಗಳಿಸಿದ್ದಾರೆ. ಇತ್ತೀಚೆಗೆ ಮೈಸೂರಿನ ಕ್ರಾಫರ್ಡ್ ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉಪಕುಲಪತಿ, ಅಶ್ವಿನಿ ಅವರಿಗೆ ಚಿನ್ನದ ಪದಕಗಳನ್ನು ನೀಡಿ ಗೌರವಿಸಿದರು.

ಭಕ್ತರಿಗೆ ಪಾನಕ ಪ್ರಸಾದ
ಹಾಸನ: ಶ್ರೀರಾಮ ನವಮಿಯನ್ನು ನಗರದಲ್ಲಿ ಮಂಗಳವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಪಾರ್ಕ್ ರಸ್ತೆ ಬಳಿ ಇರುವ ಸೀತಾರಾಮಾಂಜನೇಯ ದೇವಾಲಯದಲ್ಲಿ ಶ್ರೀರಾಮನಿಗೆ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಭಕ್ತರಿಗೆ ಪಾನಕ ಹಾಗೂ ಪ್ರಸಾದ ವಿನಿಯೋಗಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರು ಪಾಲ್ಗೊಂಡಿದ್ದರು. ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.

ಕಾಂಗ್ರೆಸ್, ಬಿಜೆಪಿ ಭ್ರಷ್ಟ ಪಕ್ಷಗಳು
ಹಾಸನ: ಕಾಂಗ್ರೆಸ್ ಹಾಗೂ ಭ್ರಷ್ಟಾಚಾರದಲ್ಲಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಬಿಜೆಪಿ ಎಸ್ಸಿ ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷ ವೀರಯ್ಯ ಆರೋಪಿಸಿದ್ದಾರೆ.
ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಬಿಜೆಪಿ ಎಸ್ಸಿ ಎಸ್ಟಿ ಮೋರ್ಚಾ ಘಟಕದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಎಲ್ಲಾ ವರ್ಗದ ಜನರಿಗೆ ಯೋಜನೆಗಳನ್ನು ರೂಪಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲಗೊಂಡಿದೆ. ಹಾಗೆಯೇ, ದೇಶದ ಪ್ರಧಾನಿಯಾಗಿ ಆಡಳಿತ ನಡೆಸಿ ಜಿಲ್ಲೆಯಲ್ಲಿ ಅನೇಕ ಬಾರಿ ಸಂಸದರಾಗಿ ಆಯ್ಕೆಗೊಂಡ ಎಚ್.ಡಿ. ದೇವೇಗೌಡರು ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಸುಮ್ಮನೆ ಕುಳಿತು ಈಗ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಕಾರ್ಯಕ್ರಮದಲ್ಲಿ ಲೋಕಸಭಾ ಅಭ್ಯರ್ಥಿ ವಿಜಯಶಂಕರ್, ಎಸ್ಸಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಪರ್ವತಯ್ಯ, ಮೋರ್ಚಾ ಅಧ್ಯಕ್ಷ ಚನ್ನಕೇಶವ, ಪ್ರಧಾನ ಕಾರ್ಯದರ್ಶಿ ನಾಗೇಶ್, ಮುಖಂಡರಾದ ನವೀಲೆ ಅಣ್ಣಪ್ಪ, ಬಿ.ಆರ್. ಗುರುದೇವ್, ಜಿಲ್ಲಾಧ್ಯಕ್ಷ ರೇಣುಕುಮಾರ್, ನಾರಾಯಣ್ ಮೇಘರಾಜ್ ಹಾಗೂ ಇತರರು ಇದ್ದರು.

ಕಾಂಗ್ರೆಸ್, ಎಎಪಿಗೆ ರೈತರ ಬೆಂಬಲ
ಮೈಸೂರು: ಕರ್ನಾಟಕ ರಾಜ್ಯ ರೈತ ಸಂಘದವರು ಕಾಂಗ್ರೆಸ್ ಹಾಗೂ ಎಎಪಿ ಬೆಂಬಲಿಸುವಂತೆ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಹೇಳಿದರು. ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ವೋದಯ ಕರ್ನಾಟಕ ಪಕ್ಷವು ಕಾಂಗ್ರೆಸ್ ಮತ್ತು ಎಎಪಿಗೆ ಬೆಂಬಲ ನೀಡುವ ನಿರ್ಧಾರ ಕೈಗೊಂಡಿದ್ದು, ರೈತ ಸಂಘ ಹಾಗೂ ಹಸಿರು ಸೇನೆ ಸಮ್ಮತಿ ಸೂಚಿಸಿದೆ. ಆದ್ದರಿಂದ ರೈತರು ಕಾಂಗ್ರೆಸ್, ಎಎಪಿಗೆ ಗೆಲವು ಸಹಕರಿಸುವಂತೆ ಮನವಿ ಮಾಡಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರಾಜ್ಯ ವರಿಷ್ಠ ಮಂಡಳಿ ಸದಸ್ಯರಾದ ಕೆ.ಎಂ.ಪುಟ್ಟಸ್ವಾಮಿ, ಅಶ್ವಥ್‌ನಾರಾಯಣ ರಾಜೇ ಅರಸ್, ಜಿಲ್ಲಾ ಸಂಚಾಲಕ ಸರಗೂರು ನಟರಾಜು ಇದ್ದರು. ಪಿರಿಯಾಪಟ್ಟಣ, ಹುಣಸೂರು, ನಂಜನಗೂಡು, ಎಚ್.ಡಿ. ಕೋಟೆ ಸೇರಿದಂತೆ ವಿವಿಧ ತಾಲೂಕುಗಳಿಂದ ರೈತರು ಆಗಮಿಸಿದ್ದರು.

ಚರ್ಚಾಗೋಷ್ಠಿ
ಹಾಸನ: ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏ. 9ರಂದು ಸಂಜೆ 5.30ರಿಂದ  7ರವರೆಗೆ ರಾಜಕೀಯ ಪಕ್ಷಗಳ ಪ್ರಣಾಳಿಕೆ ಮತ್ತು ಆರ್ಥಿಕ ನೀತಿಗಳ ಕುರಿತು ಚರ್ಚಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ನಗರದ ಕಲಾ ಕಾಲೇಜಿನ ಸ್ನಾತಕೋತ್ತರ ವಿಭಾಗದ ರಾಜಕೀಯ ವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಎನ್.ಎಂ. ಲಕ್ಷ್ಮಣ್ ವಿಚಾರ ಮಂಡಿಸಲಿದ್ದಾರೆ.
 
ಸಿಇಟಿ ತರಬೇತಿ
ಹಾಸನ: ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯ ಬಿ.ಜಿ.ಎಸ್. ಸ್ಟಡಿ ಸೆಂಟರ್ ಸಭಾಂಗಣದಲ್ಲಿ ಏ. 9ರಿಂದ ದ್ವಿತೀಯ ಸಿ.ಇ.ಟಿ. ತರಬೇತಿ ಶಿಬಿರ ಆರಂಭವಾಗಲಿದೆ. ಬೆಳಗ್ಗೆ 10ಕ್ಕೆ ನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಶಿಬಿರ ಉದ್ಘಾಟಿಸುವರು. ಎ.ವಿ.ಕೆ. ಮಹಿಳಾ ಕಾಲೇಜು ಪ್ರಾಂಶುಪಾಲೆ ಡಾ. ಜೆ. ಶೈಲಜಾಕುಮಾರಿ ಅಧ್ಯಕ್ಷತೆ ವಹಿಸುವರು. ಎ.ವಿ.ಕೆ. ಮಹಿಳಾ ಕಾಲೇಜು ಪ್ರಾಧ್ಯಾಪಕ ಡಾ. ಎಚ್.ಕೆ. ಕುಶಾಲಪ್ಪ ಮತ್ತು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಶಿಕ್ಷಣಾಧಿಕಾರಿ ಎಚ್.ಬಿ. ಚಂದ್ರಶೇಖರ್ ಭಾಗವಹಿಸುವರು.

ಶವ ಪತ್ತೆ
ಹಾಸನ: ಅಪರಿಚಿತ ವ್ಯಕ್ಯಿಯೋರ್ವನ ಮೃತ ದೇಹ ರೇಲ್ವೆ ಹಳಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ನಗರದ ಕರೀಗೌಡ ಕಾಲೋನಿಯ ಸಮೀಪದ ರೇಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಕುತ್ತಿಗೆಯ ಮೇಲೆ ರೈಲು ಹರಿದ ಪರಿಣಾಮ ಕುತ್ತಿಗೆ ತುಂಡಾಗಿದೆ. ಮುಖದ ಗುರುತು ಪತ್ತೆಯಾಗದ ಕಾರಣ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸಾವಿನ ನಿಖರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.