ಹಾಸನ

ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಅವಶ್ಯಕ

Published On :
ಹೊಳೆನರಸೀಪುರ: ಇಂದಿನ ದಿನಗಳಲ್ಲಿ ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಅವಶ್ಯಕ ಹಾಗೂ ಅನಿವಾರ್ಯ ಎಂದು ಹಾಸನದ ಎನ್.ಡಿ.ಆರ್.ಕೆ. ಕಾಲೇಜಿನ ಗಣಕ ವಿಜ್ಞಾನ ಉಪನ್ಯಾಸಕ ಡಾ.ಎ.ಆರ್. ಕಿರಣ್ ಕುಮಾರ್ ತಿಳಿಸಿದರು. 
ತಾಲೂಕಿನ ಪಡುವಲಹಿಪ್ಪೆಯಲ್ಲಿನ ಎಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಗಣಕ ವಿಜ್ಞಾನ ವಿಭಾಗದ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಅವರು ಪ್ರಸ್ತುತ ದಿನದಲ್ಲಿ ಕಂಪ್ಯೂಟರ್ ಜ್ಞಾನದ ಮಹತ್ವ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಚರ್ಚೆ: ಐ.ಎ.ಎಸ್., ಕೆ.ಎ.ಎಸ್., ಎನ್.ಇ.ಟಿ., ಎಸ್.ಎಲ್.ಇ.ಟಿ., ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಣಕ ವಿಜ್ಞಾನ ವಿಭಾಗದ ಪ್ರಶ್ನೆಗಳಿಗೆ ಶೇ. 5ರಿಂದ 10 ರಷ್ಟು ಅಂಕಗಳನ್ನು ಮೀಸಲಾಗಿಟ್ಟಿದ್ದು, ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಕಂಪ್ಯೂಟರ್ ಜ್ಞಾನ ಅತ್ಯಗತ್ಯ ಎಂದರು. ಕಂಪ್ಯೂಟರ್ ಬಗ್ಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಕೆಲವು ಮಾದರಿ ಪ್ರಶ್ನೆಗಳನ್ನು ವಿದ್ಯಾರ್ಥಿಗಛಳೊಂದಿಗೆ ಚರ್ಚಿಸಿದರು. 
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್‌ನ ಬಳಕೆ ಎಲ್ಲಾ ಕ್ಷೇತ್ರಗಳಲ್ಲೂ ವ್ಯಾಪಿಸಿದ್ದು, ಕಂಪ್ಯೂಟರ್ ಜ್ಞಾನ ಅತ್ಯಗತ್ಯ ಹಾಗೂ ಅನಿವಾರ್ಯ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ಡಿ.ಎಂ. ಮಂಜುನಾಥ, ಇಂದಿನ ದಿನಗಳಲ್ಲಿ ಕಂಪ್ಯೂಟರ್ ಜ್ಞಾನ ಪಡೆಯದವರನ್ನು ಅನಕ್ಷರಸ್ಥರು ಎನ್ನುವ ಮಟ್ಟಿಗೆ ಕಂಪ್ಯೂಟರ್‌ನ ವ್ಯಾಪ್ತಿ ಬೆಳೆದಿದೆ ಎಂದರು. ಕಾರ್ಯಕ್ರಮದಲ್ಲಿ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 20ಕ್ಕೂ ಹೆಚ್ಚು ಉಪನ್ಯಾಸಕರು ಭಾಗವಹಿಸಿ ಕಾರ್ಯಕ್ರಮದ ಉಪಯುಕ್ತತೆ ಪಡೆದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ಜಿ.ಜಿ. ಭರತ್ ಹಾಗೂ ರಾಜ್ಯಶಾಸ್ತ್ರ ವಿಭಾಗದ ಕೆ.ವಿ. ಪಾರ್ಥೇಶ ಉಪಸ್ಥಿತರಿದ್ದರು. ಮಮತಾ ಪ್ರಾರ್ಥಿಸಿ, ಪುಷ್ಪಾದೇವಿ ಸ್ವಾಗತಿಸಿದರು. ಕಾವ್ಯ ವಂದಿಸಿ, ಕಾರ್ಯಕ್ರಮವನ್ನು ಅಶ್ವಿನಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.