'ಡೈರಿ, ಡಿಸಿಸಿ ಬ್ಯಾಂಕ್ ಸೂಪರ್ಸೀಡ್ ಮಾಡಿ'
Published On :
ಹಾಸನ: ಹಾಸನ ಹಾಲು ಒಕ್ಕೂಟ ಮತ್ತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕನ್ನು ಸೂಪರ್ ಸೀಡ್ ಮಾಡುವಂತೆ ಜಿಲ್ಲಾ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಎಂ.ಕೆ. ಶೇಷೇಗೌಡ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಹಾಲು ಒಕ್ಕೂಟದ ಆಡಳಿತ ಮಂಡಳಿಯ ಚುನಾಯಿತ ನಿರ್ದೇಶಕರ ಅವಧಿ ಮುಗಿದಿದ್ದು, ಹಾಲು ಒಕ್ಕೂಟಕ್ಕೆ ಜಿಲ್ಲಾಧಿಕಾರಿಯನ್ನು ಸರ್ಕಾರ ಅಡಳಿತಾಧಿಕಾರಿಯನ್ನಾಗಿ ನೇಮಿಸಿದ್ದರೂ, ಸರ್ಕಾರದ ಆದೇಶದ ವಿರುದ್ಧ ಮಂಡಳಿಯ ಅಧ್ಯಕ್ಷ ಎಚ್.ಡಿ. ರೇವಣ್ಣ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. ಯಾವುದೇ ಕಾರಣಕ್ಕೂ ಅಧ್ಯಕ್ಷ ಸ್ಥಾನವನ್ನು ರೇವಣ್ಣನವರಿಗೆ ಬಿಟ್ಟುಕೊಡಬಾರದು ಎಂದರು.
ಮನವಿ ಸಲ್ಲಿಸಲಾಗಿದೆ: ರೇವಣ್ಣ ಮಂಡಳಿಯಲ್ಲಿ ನಡೆಸಿರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದಿಂದಾಗಿ ವಿದರ್ಭ ಯೋಜನೆಯ ಸುಮಾರು ರು. 150 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ತನಿಖೆ ನಡೆಸಲು ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಇದರ ಜೊತೆಗೆ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆಯೂ ಸೂಕ್ತ ದಾಖಲಾತಿ ನೀಡಿದ್ದು, ಚುನಾವಣೆಯ ನಂತರ ಈ ಎರಡು ಸಹಕಾರಿ ಸಂಸ್ಥೆಯನ್ನು ಸೂಪರ್ ಸೀಡ್ ಮಾಡಬೇಕು ಎಂದರು.
ಹೈಕೋರ್ಟ್ನಲ್ಲಿ ರೇವಣ್ಣ ಸುಳ್ಳು ಮಾಹಿತಿ ನೀಡಿ ತಡೆಯಾಜ್ಞೆ ತಂದು ಕಾನೂನು ಬಾಹಿರವಾಗಿ ಹಾಲು ಮಂಡಳಿಯ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಹಾಲು ಉತ್ಪಾದಕ ರೈತರ ಹಣದಲ್ಲಿ ಮೋಜು ಮಾಡುತ್ತಿದ್ದಾರೆ. ತಮ್ಮ ಸಂಬಂಧಿಗಳಿಗೆ ಅವೈಜ್ಞಾನಿಕವಾಗಿ ಆಯಕಟ್ಟಿನ ಹುದ್ದೆ ನೀಡಿ ಲಕ್ಷಾಂತರ ರುಪಾಯಿ ಸಂಬಳ ನೀಡುತ್ತಿದ್ದಾರೆ. ಖರೀದಿ ಹಾಗೂ ಮಾರಾಟದಲ್ಲಿ ಪಾರದರ್ಶಕತೆ ಅಳವಡಿಸದೆ ನಿಯಮ ಬಾಹೀರ ಕೃತ್ಯ ಎಸಗಿದ್ದಾರೆ. ಆದ್ದರಿಂದ ರೇವಣ್ಣನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

