ಹಾಸನ

ರಾಜಿ ಸಂಧಾನದ ಮೂಲಕ 2 ಸಾವಿರ ಪ್ರಕರಣ ಇತ್ಯರ್ಥ

Published On :
ಅರಸೀಕೆರೆ: ಸವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಕಳೆದ 3 ತಿಂಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಲೋಕ ಅದಾಲತ್ ಕಲಾಪಗಳಲ್ಲಿ ಅಂದಾಜು 2 ಸಾವಿರ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲಾಗಿದೆ ಎಂದು ಪಟ್ಟಣದ ಜೆ.ಎಂ.ಎಫ್.ಸಿ ಹಿರಿಯ ನ್ಯಾಯಾಧೀಶ ಇ. ಚಂದ್ರಕಲಾ ತಿಳಿಸಿದರು.
ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಪಟ್ಟಣದ ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು. 
ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ದೇಶ ವ್ಯಾಪ್ತಿಯ ಎಲ್ಲಾ ನ್ಯಾಯಾಲಯಗಳಲ್ಲೂ ಜ. 6 ರಿಂದ ಏ. 12ರವರೆಗೂ ರಾಷ್ಟ್ರೀಯ ಲೋಕ ಅದಾಲತ್ ಜನತಾ ನ್ಯಾಯಾಲಯವನ್ನು ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆಸಲಾಗುತ್ತಿದೆ ಎಂದರು. 
ಇತ್ಯರ್ಥಗೊಂಡ ಪ್ರಕರಣಗಳು:ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಲೋಕ ಅದಾಲತ್ ಜನತಾ ನ್ಯಾಯಾಲಯದಲ್ಲಿ ಸಿವಿಲ್ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು, ಲಘು ಅಪರಾಧ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ಜನನ ಮತ್ತು ಮರಣ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳಲ್ಲದೇ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 150 ಪ್ರಕರಣಗಳು, ಕಿರಿಯ ಸಿವಿಲ್ ನ್ಯಾಯಾಲಯದಲ್ಲಿ 1247 ಪ್ರಕರಣಗಳು ಹಾಗೂ ಅಪರ ಸಿವಿಲ್ ನ್ಯಾಯಾಲಯದಲ್ಲಿ 600 ಪ್ರಕರಣಗಳು ಈಗಾಗಲೇ ಪರಸ್ಪರ ರಾಜಿ ಸಂಧಾನಗಳ ಮೂಲಕ ಇತ್ಯರ್ಥ ಮಾಡಲಾಗಿದೆ ಎಂದು ಅವರು ವಿವರಣೆ ನೀಡಿದರು. 
ಸಿವಿಲ್ ಕಿರಿಯ ನ್ಯಾಯಾಲಯದ ನ್ಯಾಯಾಧೀಶ ದೇವಾನಂದ ಮಾತನಾಡಿ, ಏ. 12ರಂದು ಶನಿವಾರದ ದಿನದಂದು ದೇಶದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಜನತಾ ನ್ಯಾಯಾಲಯ ಕಲಾಪಗಳು ನಡೆಯುತ್ತಿರುವ ಕಾರಣ ಜನರು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದರು.  ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ಸರ್ವೇಶ್, ಡಿ.ವೈ.ಎಸ್.ಪಿ. ಮಂಜುನಾಥಸಬ್ ಇನ್ಸ್‌ಪೆಕ್ಟರ್ ಸುನೀಲ್, ಕಾವೇರಿ ಗ್ರಾಮೀಣಾ ಬ್ಯಾಂಕಿನ ವ್ಯವಸ್ಥಾಪಕ  ಶ್ರೀಧರ್, ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್, ಎಸ್.ಬಿ.ಐ ಬ್ಯಾಂಕಿನ ಅಧಿಕಾರಿಗಳು, ಕಾರ್ಮಿಕ ಇಲಾಖೆ ನಿರೀಕ್ಷಕ ವಿಜಯಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ಶಿವಣ್ಣ, ಪುರಸಭಾ ಆರೋಗ್ಯಾಧಿಕಾರಿ ರಮೇಶ್ ಹಾಗೂ ನಾನಾ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.