ಹಾಸನ

ಹಿಂದುಳಿದವರ ಶೇ. 56ರಷ್ಟು ಮತ ಗೌಡರಿಗೆ

Published On :

ಚನ್ನರಾಯಪಟ್ಟಣ: ಜಿಲ್ಲೆಯಲ್ಲಿ ಒಟ್ಟು ಹಿಂದುಳಿದ ವರ್ಗದ ಮತದಾನ ಶೇ. 56 ರಷ್ಟು ಇದ್ದು, ಹಾಸನ ಜೆಡಿಎಸ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಬೆಂಬಲವನ್ನು ನೀಡುತ್ತೇವೆ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಹಾಗೂ ಜೆಡಿಎಸ್‌ನ ಸಂಸದೀಯ ಮಂಡಳಿ ಅಧ್ಯಕ್ಷ ಎಚ್. ಸಿ. ನೀರಾವರಿ ತಿಳಿಸಿದರು. ಅವರು ಪಟ್ಟಣದ ಪ್ರಮುಖ ಬೀದಿಯಲ್ಲಿ ದೇವೇಗೌಡರ ಪರ ಮತಯಾಚಿಸಿ ಮಾತನಾಡಿ ಹಿಂದುಳಿದ ವರ್ಗದವರಿಗೆ ರಾಜಕೀಯವಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾನ ಮಾನ ಕಲ್ಪಿಸಿದ ಧೀಮಂತ ರಾಜಕಾರಣಿ ಎಂದು ಗೌಡರನ್ನು ಹೊಗಳಿದರು. ಹಿರಿಯರಾದ  ದೇವೇಗೌಡರಿಗೆ ಜಿಲ್ಲಾ ಹಿಂದುಳಿದ ವರ್ಗದವರ ಬೆಂಬಲ ಕೋರಿ ಜಿಲ್ಲಾದ್ಯಂತ ಪ್ರಚಾರವನ್ನು ನಡೆಸಲಾಗುತ್ತಿದ್ದು ಈ ಬಾರಿ ಗೌಡರು ಅತಿ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂದರು. ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ನೇಕಾರ ಜನಾಂಗದ ಜಿಲ್ಲಾಧ್ಯಕ್ಷ ಎಚ್. ಅಣ್ಣಪ್ಪಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ನೀಲಪ್ಪ, ತಾಲೂಕು ಕುರುಹಿನಶೆಟ್ಟಿ ಸಂಘದ ಕಾರ್ಯದರ್ಶಿ ಸುರೇಶ್ ಬಾಳೇಮಂಡಿ, ಜಿಲ್ಲಾ ಉಪ್ಪಾರ ಸಮಾಜದ ಗೌರವಾಧ್ಯಕ್ಷ ಗೋಪಾಲಗೌಡ ಹಾಗೂ ಮತ್ತಿತರರು ಪ್ರಚಾರ ನಡೆಸಿದರು. ದೇವೇಗೌಡರಿಗೆ ಹಿಂದುಳಿದ ವರ್ಗ, ದೀನ- ದಲಿತರು, ಅಲ್ಪಸಂಖ್ಯಾತರು ಹಾಗೂ ಎಲ್ಲಾ ರೈತಬಾಂಧವರೂ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.