ಮತಜಾಗೃತಿಗಾಗಿ ಎತ್ತಿನಗಾಡಿ ರ್ಯಾಲಿ
ಹಾಸನ: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಜೆಲ್ಲೆಯಾದ್ಯಂತ ಪ್ರತಿನಿತ್ಯ ವಿನೂತನ ಕಾರ್ಯಕ್ರಮಗಳ ಮೂಲಕ ಮತದಾರರ ಗಮನ ಸೆಳೆಯುತ್ತಿದೆ. ಈ ನಿಟ್ಟಿನಲ್ಲಿ ಹಾಸನ ನಗರದಲ್ಲಿ ಬುಧವಾರ ಎತ್ತಿನ ಗಾಡಿ ಜಾಥಾ ಯೋಜಿಸುವ ಮೂಲಕ ಮತದಾರರನ್ನು ಆಕರ್ಷಿಸಿತು.
ನಗರದ ಕೃಷಿ ಇಲಾಖೆ ಆವರಣದಿಂದ ಪ್ರಾರಂಭಗೊಂಡ ಮೆರವಣಿಗೆ ಬಿ.ಎಂ.ರಸ್ತೆ, ಬಸ್ ನಿಲ್ದಾಣ ರಸ್ತೆ, ಸಾಲಗಾಮೆ ರಸ್ತೆ, ಶಂಕರ ಮಠ ರಸ್ತೆ, ಕೆ.ಆರ್.ಪುರಂ, ವಿದ್ಯಾನಗರ, ಕುವೆಂಪು ನಗರ, ಮತ್ತಿತರೆಡೆ ಸಂಚರಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.
ತಳಿರು ತೋರಣಗಳಿಂದ ಶೃಂಗರಿಸಿಸಲ್ಪಟ್ಟಿದ್ದ 20ಕ್ಕೂ ಹೆಚ್ಚು ಎತ್ತಿನಗಾಡಿಗಳು, ರೈತ ಸಮೂಹದೊಂದಿಗೆ ಬ್ಯಾನರ್ ಇನ್ನಿತರ ಪ್ರದರ್ಶನ ಸಾಮಗ್ರಿಗಳನ್ನು ಹಿಡಿದು ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದವು. ಇದರೊಂದಿಗೆ, ವಿಶೇಷ ವಿನ್ಯಾಸದ ಪ್ರಚಾರ ವಾಹನ, ಕಲಾ ತಂಡಗಳು, ನಗರಸಭೆಯ ಆಟೋಗಳು ಮೆರವಣಿಗೆಗೆ ವಿಶೇಷ ಮೆರುಗು ನೀಡಿದವು.
ಮತದಾನದ ಅರಿವು: ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ಜಂಟಿ ಕೃಷಿ ನಿರ್ದೇಶಕ ಶಿವರಾಜ್, ತಹಸೀಲ್ದಾರ್ ಮಂಜುನಾಥ್, ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ವಿನೋದ್ ಚಂದ್ರ, ಜಿಲ್ಲಾ ಪಂಚಾಯ್ತಿ ಯೋಜನಾ ನಿರ್ದೇಶಕ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಶಿವಣ್ಣ, ಜಿಲ್ಲೆಯ ಸಾವಯವ ಕೃಷಿ ಸಮುದಾಯದ ಮುಖಂಡ ಅನುಗನಾಳ್ ಕೃಷ್ಣಮೂರ್ತಿ, ತಾಲೂಕು ಕೃಷಿ ಅಧಿಕಾರಿ ಕೋಕಿಲ ಮತ್ತಿತರರು ಸಹ ಎತ್ತಿನ ಬಂಡಿ ಏರಿ ಮೆರವಣಿಗೆಯಲ್ಲಿ ಸಾಗಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಎತ್ತಿನಗಾಡಿ ಮೆರವಣಿಗೆಗೆ ಚಾಲನೆ ನೀಡಿದ ಸ್ವೀಪ್ಸ್ಮಿತಿ ಅಧ್ಯಕ್ಷ ಉಪೇಂದ್ರ ಪ್ರತಾಪ್ ಸಿಂಗ್ ಮಾತನಾಡಿ, ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. ಈ ಬಾರಿಯಾದರೂ ಇದನ್ನು ಸರಿಪಡಿಸಲು ಮತದಾರರ ಜಾಗೃತಿಗೆ ನಿರಂತರ ವಿಭಿನ್ನ ಪ್ರಯತ್ನ ಕೈಗೊಳ್ಳಲಾಗುತ್ತಿದೆ ಎಂದರು. ಗ್ರಾಮೀಣ ಪ್ರದೇಶದ ರೈತಾಪಿ ವರ್ಗದವರು ನಗರ ಪ್ರದೇಶದಲ್ಲಿ ಎತ್ತಿನಗಾಡಿಗಳೊಂದಿಗೆ ಸಂಚರಿಸಿ ನಾವೂ ಮತ ಹಾಕುತ್ತೇವೆ ನೀವೂ ಮತದಾನದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವ ಬಲಗೊಳಿಸಿ ಎಂಬ ಸಂದೇಶವನ್ನು ಎಲ್ಲೆಡೆ ಸಾರಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

