ಹಾಸನ

ಮತದಾನದಿಂದ ದೂರ ಸರಿದ ರೈತರು

Published On :

ಹಾಸನ: ಕಾಚೇನಹಳ್ಳಿ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿ ಕುಡಿಯುವ ನೀರು ಒದಗಿಸದ ಕಾರಣ ಈ ಬಾರಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲಾಗಿದೆ ಎಂದು ದಂಡಿಗನಹಳ್ಳಿ ಹೋಬಳಿ ಕಾಚೇನಹಳ್ಳಿ- ಆಲಗೊಂಡನಹಳ್ಳಿ ಏತ ನೀರಾವರಿ ಹೋರಾಟಗಾರರ ಸಮಿತಿಯ ಅಜ್ಜೇಗೌಡ ತಿಳಿಸಿದರು.
ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿಯ ವ್ಯಾಪ್ತಿಗೆ ಬರುವ ಕಾಚೇನಹಳ್ಳಿ ಏತ ನೀರಾವರಿ ಯೋಜನೆ ಕಳೆದ 22 ವರ್ಷಗಳಿಂದ ಮಂದಗತಿಯಲ್ಲಿ ಸಾಗಿದ್ದು, ಇದಕ್ಕೆ ಎಲ್ಲ ರಾಜಕೀಯ ಪಕ್ಷಗಳು ಕಾರಣ. ಇದರಲ್ಲಿ ಪ್ರಮುಖವಾಗಿ ದೇವೇಗೌಡರು ಮತ್ತವರ ಮಕ್ಕಳೇ ನೇರ ಹೊಣೆಯಾಗಿದ್ದಾರೆ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು.
ತೀರ್ಮಾನ: ಕಾಚೇನಹಳ್ಳಿ-ಆಲಗೊಂಡನಹಳ್ಳಿ ಏತ ನೀರಾವರಿ ಯೋಜನೆ ಜಾರಿಗೆ ರಾಜಕಾರಣಿಗಳು ಹಿಂದೇಟು ಹಾಕಿರುವುರಿಂದ ಹಾಗೂ ಈ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಇಡೀ ದಂಡಿಗನಹಳ್ಳಿ ಹೋಬಳಿಯ ಜನತೆ ಹಾಗೂ ಜಾನುವಾರುಗಳು ಕುಡಿಯುವ ನೀರಿಗೆ ಹಾಹಾಕಾರ ಪಡುವಂತಾಗಿದೆ ಎಂದರು.
ಬಹಿಷ್ಕಾರಕ್ಕೆ ಕರೆ: ರಾಜಕೀಯ ಮೇಲಾಟದಿಂದಾಗಿ ಈ ಭಾಗದಲ್ಲಿ ಬರುವಂತಹ 48 ಹಳ್ಳಿಗಳ ಜನರು ನೀರಿಗೆ ತೊಂದರೆ ಅನುಭವಿಸುತ್ತಿದ್ದಾರೆ. ಸಮಿತಿ ಮೂರವರೆ ಸಾವಿರ ಮಂದಿ ಸದಸ್ಯರಿಗೆ ಚುನಾವಣೆ ಬಹಿಷ್ಕರಿಸುವಂತೆ ಕರೆ ನೀಡಲಾಗಿದೆ ಎಂದು ಹೇಳಿದರು.  
ಈ ಏತ ನೀರಾವರಿ ಯೋಜನೆಯ ವಿಳಂಬಕ್ಕೆ ಜೆಡಿಎಸ್‌ನವರು ನೇರ ಹೊಣೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಚುನಾವಣೆ ಪ್ರಚಾರಕ್ಕೆ ಆಗಮಿಸುತ್ತಿರುವುದರಿಂದ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ  ಶಿವರುದ್ರಪ್ಪ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.