'ಮತದಾರನ ಕೃಪೆ ಕಾಂಗ್ರೆಸ್ಗೇ'
ರಾಮನಾಥಪುರ: ರಾಜ್ಯ ಸರ್ಕಾರದ ಅನ್ನಭಾಗ್ಯ ಕ್ಷೀರಭಾಗ್ಯ, ಅಕ್ಷರಭಾಗ್ಯ, ಬಡ್ಡಿರಹಿತ ಸಾಲ ಯೋಜನೆಗಳನ್ನು ಮೆಚ್ಚಿರುವ ಮತದಾರರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ನೀಡುತ್ತಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಂತರ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ರಾಮನಾಥಪುರದ ಬಸವೇಶ್ವರ ಪಟ್ಟಣದಲ್ಲಿ ಮಂಗಳವಾರ ನಡೆದ ರೋಡ್ ಶೋ ನಂತರ ಇಲ್ಲಿಯ ಸಂಕ್ರಾತಿ ಕಲ್ಯಾಣ ಮಂಟಪದಲ್ಲಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಎ. ಮಂಜುರವರ ಗೆಲವಿನಿಂದ ಜಿಲ್ಲೆ ಮತ್ತಷ್ಟು ಅಭಿವೃದ್ಧಿಯಾಗಲಿದೆ. ಕೇಂದ್ರದ ಯುಪಿಎ ಸರ್ಕಾರ ದೇಶದ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ಮತ್ತು ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರದ ಜನಪರ ಯೋಜನೆಗಳನ್ನು ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಶ್ರೇಯೋಭಿವೃದ್ಧಿಗೆ ಆದ್ಯತೆ: ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಿಗೆರೆ ಬೈರೇಗೌಡ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಒಗ್ಗೂಡಿ ಕಾರ್ಯಪ್ರವೃತ್ತರಾಗಬೇಕು. ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ರಾಜ್ಯ ಸರ್ಕಾರದ ಪರ ಜನಪರ ಯೋಜನೆಗಳನ್ನು ರೂಪಿಸಿ, ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ದೊಡ್ಡಮಗ್ಗೆ ಹೋಬಳಿ ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ರಾಜೇಗೌಡ, ಹೋಬಳಿ ಅಧ್ಯಕ್ಷ ಗಂಗೂರು ಜಿ.ಸಿ. ಮಂಜೇಗೌಡ, ತಾಲೂಕು ಪಿಎಲ್ಡಿ ಬ್ಯಾಂಕ್ನ ಮಾಜಿ ಉಪಾಧ್ಯಕ್ಷ ಎಸ್.ಎಂ. ಮಲ್ಲೇಶ್, ತಾಲೂಕು ಪಂಚಾಯ್ತಿ ಮಾಜಿ. ಸದಸ್ಯ ಲೋಕನಾಥ್ ಹಾಗೂ ಬಾನುಗುಂದಿ ಪುಟ್ಟೇಗೌಡ, ಹಾರಂಗಿ ಮಹಾ ಮಂಡಲ ಅಧ್ಯಕ್ಷ ಚೌಡೇಗೌಡ, ಕಾಂಗ್ರೆನ ಹಿಂದುಳಿದ ವರ್ಗದ ಮುತ್ತಿಗೆ ರಮೇಶ್ ಹಾಗೂ ನಿರ್ದೇಶಕ ಹಾಸನ ಪ್ರಸನ್ನಕುಮಾರ್, ಬಸವಪಟ್ಟಣ ಗ್ರಾಪಂ ಮಾಜಿ ಅಧ್ಯಕ್ಷ ಮಹೇಂದ್ರಕುಮಾರ್ ಹಾಗೂ ಇತರರು ಮಾತನಾಡಿದರು.
ರಾಮನಾಥಪುರ ಗ್ರಾಪಂ ಮಾಜಿ ಅಧ್ಯಕ್ಷ ಅರ್.ಎಸ್. ನರಸಿಂಹಮೂರ್ತಿ ಮಾಜಿ ಅಧ್ಯಕ್ಷ ಗಂಗೂರು ಸಿ. ರಾಮೇಗೌಡ, ಪಿಎಸಿಸಿ ಬ್ಯಾಂಕ್ ನಿರ್ದೇಶಕ ಜಿ.ಟಿ. ಕುಮಾರಸಾಮಿ, ಗ್ರಾಪಂ ಸದಸ್ಯರಾದ ರಾಮೇಗೌಡ, ಭರತ್, ಜಯಪ್ರಕಾಶ್, ಲೋಕೇಶ್, ಧನಂಜಯ ಮಂಜುನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿ.ಸಿ. ಮಂಜೇಗೌಡ ಸ್ವಾಗತಿಸಿ, ಕುಮಾರಸ್ವಾಮಿ ವಂದಿಸಿದರು.
ಸೇರ್ಪಡೆ: ರಾಮನಾಥಪುರದ ಬಸವೇಶ್ವರ ಇಲ್ಲಿಯ ಸಂಕ್ರಾತಿ ಕಲ್ಯಾಣ ಮಂಟಪದಲ್ಲಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ನೂರಾರು ಜೆ.ಡಿ.ಎಸ್. ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

