ಸ್ಕೌಟ್ಸ್ ವಿದ್ಯಾರ್ಥಿಗಳ ಹೊರ ಸಂಚಾರ
ಅರಸೀಕೆರೆ: ತಾಲೂಕಿನ ಬಾಗೇಶಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೇತಾಜಿ ಸ್ಕೌಟ್ಸ್ ಟ್ರೂಪ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ 6 ಕಿ.ಮೀ.ಗಳ ಹೊರ ಸಂಚಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಾಗೇಶಪುರ ಸಮೀಪವಿರುವ ಕುಂತಿಯಮ್ಮನ ಗುಡ್ಡದಲ್ಲಿ ಹೊರಸಂಚಾರಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ಗುಡ್ಡದ ಮೇಲಿನ ರಮ್ಯ ಪರಿಸರದಲ್ಲಿ ಕಂಪಾಸ್ ಬಳಸಿ 12 ದಿಕ್ಕುಗಳನ್ನು ಕಂಡುಹಿಡಿಯುವ ಬಗ್ಗೆ ಹಾಗೂ ದೂರದರ್ಶಕ ಬಳಸಿ ದೂರದ ದೃಶ್ಯಗಳನ್ನು ವೀಕ್ಷಿಸುವ ವಿಧಾನವನ್ನು ವಿವರಿಸಲಾಯಿತು. ಮಧ್ಯಾಹ್ನದ ಅವಧಿಯಲ್ಲಿ ಬೆಂಕಿಯಿಲ್ಲದೆ ಅಡುಗೆ ಮಾಡುವ ವಿಧಾನವನ್ನು ಪರಿಚಯಿಸಲಾಯಿತು. ಅಲ್ಲದೇ ಇದೇ ವೇಳೆ ಸಂಜೆಯ ಅವಧಿಯಲ್ಲಿ ಗಾಳಿಯಿಂದ ವಿದ್ಯುತ್ ತಯಾರಿಸುವ ವಿಧಾನದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಒದಗಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮಾಸ್ಟರ್ ಎಲ್. ಲೀಲಾ ಮಹೇಶ್ವರ್ ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ 32 ವಿದ್ಯಾರ್ಥಿಗಳು ಇದ್ದರು.
ತಾಯಿ- ಮಗು ನಾಪತ್ತೆ
ಹಾಸನ: ನಗರದ ಶೇಖರ್ ಅವರ ಪತ್ನಿ ಎನ್.ವಿ. ಪವಿತ್ರ (28) ಮತ್ತು ಅವರ ಮಗು ಕರಣ್ (2) ಇತ್ತೀಚೆಗೆ ನಾಪತ್ತೆಯಾಗಿದ್ದಾರೆ. ಪವಿತ್ರ 5.4 ಅಡಿ ಎತ್ತರವಿದ್ದು, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕನ್ನಡ ಮಾತನಾಡುತ್ತಾರೆ. ಪಿಯುಸಿವರೆಗೆ ವ್ಯಾಸಂಗ ಮನೆ ಬಿಟ್ಟು ಹೋಗುವಾಗ ಗುಲಾಬಿ ಬಣ್ಣದ ನೈಟಿ ಧರಿಸಿದ್ದರು. ಮಗು ಕರಣ್ ಗೋಧಿ ಮೈಬಣ್ಣ, ಹಸಿರು ಬಣ್ಣದ ಚಡ್ಡಿ, ಗುಲಾಬಿ ಬಣ್ಣದ ಟಿ ಶರ್ಟ್ ಧರಿಸಿದ್ದ. ಈ ಬಗ್ಗೆ ಮಾಹಿತಿ ದೊರೆತಲ್ಲಿ ಹಾಸನ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ನಂ. 08172-268845 ಅಥವಾ ಹಾಸನ ಬಡಾವಣೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08172-268967 ಇಲ್ಲಿಗೆ ಮಾಹಿತಿ ನೀಡಬೇಕೆಂದು ಹಾಸನ ಬಡಾವಣೆ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

