'ಕಾಂಗ್ರೆಸ್ನಿಂದ ದಲಿತರ ಕಡೆಗಣನೆ'
ನುಗ್ಗೇಹಳ್ಳಿ: ಸ್ಥಳೀಯ ಕಾಂಗ್ರೆಸ್ ಮುಖಂಡರು ನಮ್ಮನ್ನು ಕಡೆಗಣಿಸಿದ್ದಾರೆ ಎಂದು ನುಗ್ಗೆಹಳ್ಳಿ ತಾಲೂಕು ಪಂಚಾಯ್ತಿಯ ಕಾಂಗ್ರೆಸ್ ಸದಸ್ಯೆ ಕಮಲಮ್ಮ ಆರೋಪ ಮಾಡಿದ್ದಾರೆ.
ನನಗೆ ಹಿರಿಸಾವೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯ ಜವಾಬ್ದಾರಿಯನ್ನು ತಮಗೆ ನೀಡಿದ್ದರೂ ಪ್ರಚಾರದ ಸಭೆಗಳಿಗೆ ಸೌಜನ್ಯಕ್ಕಾದರೂ ಕರೆಯದೇ ಅವಮಾನಿಸುವ ಮೂಲಕ ದಲಿತರನ್ನು ಕಡೆಗಣಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸಂಘಟಿಸಲು ನಾವು ಶ್ರಮಿಸಿದ್ದು ಎಲ್ಲಾ ಚುನಾವಣೆಯಲ್ಲೂ ಪ್ರಾಮಾಣಿಕತೆಯಿಂದ ನಡೆದುಕೊಂಡಿದ್ದು ನನ್ನನ್ನು ಜನ ಚುನಾಯಿಸಿದ್ದಾರೆ ಅದರೂ ನಮ್ಮ ಸ್ಥಳಿಯ ಮುಖಂಡರು ಈಗ ಕಡೆಗಣಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಅಧ್ಯಕ್ಷರಿಗೆ ಪತ್ರ ಬರೆದು ರಾಜ್ಯಾಧ್ಯಕ್ಷರಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಭ್ರಷ್ಟ ಮುಕ್ತ ಆಡಳಿತ: ಭಾನುಪ್ರಕಾಶ್
ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಕಿಟಕಿ ಗುರುತಿನ ಸ್ವತಂತ್ರ ಅಭ್ಯರ್ಥಿಯಾಗಿರುವ ನನ್ನಗೆ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಗೆಲುವಿಗೆ ಸಹಕರಿಸುವಂತೆ ಪಕ್ಷೇತರ ಅಭ್ಯರ್ಥಿ ಡಾ.ಕೆ. ಭಾನುಪ್ರಕಾಶ ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಸ್ವಚ್ಚ, ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಆಡಳಿತ ನಿರ್ವಹಣೆಗೆ ಮತ್ತು ಸ್ಥಳೀಯ ಸಮಸ್ಯೆಗಳ ನಿವಾರಣೆಗೆ ನಿಮ್ಮೆಲ್ಲರ ಒತ್ತಾಸೆಯಂತೆ ನಾನು ಈ ಬಾರಿಯ ಲೋಕಸಭ ಚುನಾವಣೆಗೆ ಸ್ಪರ್ಧಿಸಿದ್ದೇನೆ. ದೇಶದ ಬೆನ್ನೆಲುಬಾಗಿರುವ ರೈತರ, ಶ್ರಮಿಕರ, ಯುವಜನರ, ಜನಸಾಮಾನ್ಯರ ಸಮಸ್ಯೆಗಳ ನಿವಾರಣೆಗಾಗಿ, ಧನಬಲ, ತೋಬ್ಳಲ ಹತ್ತಿಕ್ಕಲು ಬೆಂಬಲಿಸಬೇಕು ಎಂದರು. ರಾಜಕೀಯ ಪಕ್ಷಗಳ ಕಿತ್ತಾಟ, ದ್ವೇಷದ ರಾಜಕಾರಣವನ್ನು ಕೊನೆಗಾಣಿಸಬೇಕಾದಂತಹ ಅನಿವಾರ್ಯತೆ ಇದ್ದು, ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ನನ್ನ ಚೊಚ್ಚಲ ಪ್ರಯತ್ನಕ್ಕೆ ಆಶೀರ್ವದಿಸಬೇಕು ಎಂದು ಅವರು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

