ನಾಳೆ ಅಂಬೇಡ್ಕರ್ ದಿನಾಚರಣೆ
ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಅವರ 123ನೇ ಜಯಂತಿ ಪ್ರಯುಕ್ತ ಏಪ್ರಿಲ್ 14ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ಅಂಬೇಡ್ಕರ್ ಭವನ, ಹಾಸನ ಇಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವಪೂರ್ವಕವಾಗಿ ಜನ್ಮ ದಿನಾಚರಣೆ ಆಚರಿಸಲಾಗುವುದು. ಡಾ. ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಮಾಜಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.
ಗಣಿತ, ನಿಯಮಗಳಿಂದ ನೈಜ ಫಲಿತಾಂಶ
ಹೊಳೆನರಸೀಪುರ: ಅರ್ಥಶಾಸ್ತ್ರದಲ್ಲಿ ಗಣಿತೀಯ ಮತ್ತು ಸಂಖ್ಯಾಶಾಸ್ತ್ರದ ನಿಯಮಗಳನ್ನು ಅಳವಡಿಸಿಕೊಂಡು ಅಧ್ಯಯನ ಮಾಡುವುದರಿಂದ ನೈಜ ಫಲಿತಾಂಶ ಪಡೆಯಬಹುದು ಎಂದು ಹಾಸನದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಕೆ.ಡಿ. ಮುರುಳೀಧರ್ ತಿಳಿಸಿದರು.
ತಾಲೂಕಿನ ಪಡುವಲಹಿಪ್ಪೆಯ ಎಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಥಿಕ ನಿಯಮಗಳನ್ನು ವಿಶ್ಲೇಷಿಸುವಾಗ ಬಳಸಿಕೊಳ್ಳುವ ಅಂಕಿ ಅಂಶಗಳು ವಾಸ್ತವಿಕ ಹಿನ್ನೆಲೆಯಲ್ಲಿರಬೇಕು. ಆಗ ಮಾತ್ರ ನಿಖರವಾದ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದರು. ಬೇಡಿಕೆ, ಉತ್ಪಾದನೆ, ಉದ್ಯೋಗ, ಆದಾಯ, ಆರ್ಥಿಕ ಏರಿಳಿತ, ಬೆಲೆ ಸೂಚ್ಯಂಕ ಇವುಗಳ ನಿಖರವಾದ ಮಾಹಿತಿಯನ್ನು ಗಣಿತೀಯ ತಂತ್ರಗಳ ಮೂಲಕ ವಿಶ್ಲೇಷಿಸಲು ಅರ್ಥಶಾಸ್ತ್ರ ಸಹಕಾರಿಯಾಗಿದೆ ಎಂದು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ಮಾತನಾಡಿ, ಅರ್ಥಶಾಸ್ತ್ರದಲ್ಲಿ ಗಣಿತಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರದ ಅನ್ವಯತೆ ಪ್ರಸ್ತುತವಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

