ಮಂಜು ಕೈಯ್ಯಲ್ಲಿ ಜಿಲ್ಲಾಭಿವೃದ್ಧಿ ಅಸಾಧ್ಯ
ಜಾವಗಲ್: ಅರಕಲಗೂಡು ಶಾಸಕ ಎ. ಮಂಜು ಅವರು ತಮ್ಮ ಕ್ಷೇತ್ರದ ರಸ್ತೆಗಳಲ್ಲಿನ ಗುಂಡಿ ಮುಚ್ಚಿಲ್ಲ. ಇಂಥವರಿಂದ ಜಿಲ್ಲೆಯ ಅಭಿವೃದ್ಧಿ ಅಸಾಧ್ಯ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಪ್ರಶ್ನಿಸಿದರು.
ಜಾವಗಲ್ನಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರು ಸಿಎಂ ಆಗಿದ್ದಾಗ, ಪ್ರಧಾನಿಯಾಗಿದ್ದಾಗ ಹಲವಾರು ಜನಪರ ಯೋಜನೆ ಜಾರಿಗೆ ತಂದರು. ಆದರೆ, ತಮ್ಮ ಕ್ಷೇತ್ರದಲ್ಲಿ ರಸ್ತೆಯ ಗುಂಡಿಗಳನ್ನು ಮುಚ್ಚಲಾಗದ ಮಂಜು ಅವರಿಂದ ಜಿಲ್ಲಾಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದರು.
ಹಾಸನದಲ್ಲಿ ಹೈಟೆಕ್ ಬಸ್ ನಿಲ್ದಾಣವನ್ನು ಕಾಂಗ್ರೆಸ್ ಅವರು ಮಾಡಿದ್ದರಾ ? ಎಂದು ಪ್ರಶ್ನಿಸಿದ ರೇವಣ್ಣ, 6 ವರ್ಷದಿಂದ ಅರಕಲಗೂರು ಶಾಸಕರಾಗಿರುವ ಮಂಜು ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಹೇಳಲಿ. ಜಿಲ್ಲೆಯ ಜನತೆ ಅಪಪ್ರಚಾರಕ್ಕೆ ಕಿವಿ ಕೊಡದೇ, ಗೌಡರನ್ನು ಬೆಂಬಲಿಸ ಬೇಕು ಈಗಾಗಲೇ ಇಡೀ ಜಿಲ್ಲಾದ್ಯಂತ ಪಕ್ಷಾತೀತವಾಗಿ ಎಲ್ಲಾ ಮತದಾರರೂ ಗೌಡರ ಪರವಾಗಿದ್ದಾರೆ.
ಯುಪಿಎಗೆ ಅವಕಾಶವಿಲ್ಲ: ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಮತಗಳಿಂದ ದೇವೇಗೌಡರು ಮತ್ತೊಮ್ಮೆ ಆರಿಸಿ ಬರಲಿದ್ದಾರೆ ಎಂದರು.
ಕೇಂದ್ರದಲ್ಲಿ ಯುಪಿಎ ಮೈತ್ರಿಕೂಟದ ಸರ್ಕಾರ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದರು. ಜೆಡಿಎಸ್ ಜಿಲ್ಲಾಧ್ಯಕ್ಷ ಜಾವಗಲ್ ರಾಜಶೇಖರ್ ಮಾತನಾಡಿ, ಮತದಾರರು ಹೆಚ್ಚಿನ ರೀತಿಯಲ್ಲಿ ಮತ ನೀಡುವಂತೆ ಮನವಿ ಮಾಡಿದರು.
ಬೇಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ತೊ.ಚ. ಅನಂತಸುಬ್ಬರಾವ್, ತಾಲೂಕು ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಸೋಮಶೇಖರ್, ತಾಪಂ ಸದಸ್ಯರಾದ ಜೆ.ಕೆ. ಸಿದ್ದೇಗೌಡ, ಶಿವನಂಜೇಗೌಡ, ಜಿಪಂ ಮಾಜಿ ಸದಸ್ಯೆ ಪ್ರೇಮಮ್ಮ ನಿಂಗಪ್ಪ, ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿ. ಮಂಜುನಾಥ್, ಕಾರ್ಯದರ್ಶಿ ಅಶೋಕ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಮಾಜಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಪಾಂಡುರಾಜು, ಶ್ರೀನಿವಾಸ್, ಗ್ರಾಪಂ ಸದಸ್ಯರಾದ ಪರಮೇಶ್, ಶ್ರೀನಿವಾಸ್ ನಾಗರಾಜು, ಕುಮಾರ್, ದಲಿತ ಮುಖಂಡ ಲಕ್ಷ್ಮೀ ನಾರಾಯಣ, ಜೆಡಿಎಸ್ ಮುಖಂಡ ಲಿಂಗೇಶ್ ಸರ್ದಾರ್ ಪಾಷಾ, ಪುರಸಭೆ ಮಾಜಿ ಅಧ್ಯಕ್ಷ ಮಂಜುನಾಥ್ ಇದ್ದರು.
ಕಾಂಗ್ರೆಸ್ನಿಂದ ದಳಕ್ಕೆ ಸೇರ್ಪಡೆ
ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜೆ.ಡಿ. ಪ್ರಕಾಶ್, ಗ್ರಾಪಂ ಮಾಜಿ ಸದಸ್ಯ ಗುಡ್ಡೇನಹಳ್ಳಿ ನಿಂಗಪ್ಪ, ಬಂದೂರು ಮಲ್ಲಿಕಾರ್ಜನ, ಹರೀಶ, ಪಾಂಡುರಾಜ, ರಾಮೇಗೌಡ, ಸುಬ್ಬೇಗೌಡ ಸೇರಿದಂತೆ ಹಲವಾರು ಜನ ಬಿಜೆಪಿ ಹಾಗೂ ಕಾಂಗ್ರೆಸ್ ತೊರೆದು ರೇವಣ್ಣ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

