ಸಮಸ್ಯೆಗಳ ಆಧರಿಸಿತಯಾರಾದ ಪ್ರಣಾಳಿಕೆ
ಹಾಸನ: ಜಿಲ್ಲೆಯಾದ್ಯಂತ ಚುನಾವಣಾ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ಅರಿವಿಗೆ ಬಂದ ಸಮಸ್ಯೆಗಳನ್ನು ಇಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗಿದೆ ಬಿಜೆಪಿ ಅಭ್ಯರ್ಥಿ ವಿಜಯ ಶಂಕರ್ ತಿಳಿಸಿದರು.
ಹಾಸನ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿಯ ಹೊರತಂದ ಪ್ರಣಾಣಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಏನಿದೆ ಪ್ರಣಾಳಿಕೆಯಲ್ಲಿ?: ಹಾಸನ ಲೋಕಸಭಾ ಕ್ಷೇತ್ರದ ಎಲ್ಲಾ ಪ್ರಮುಖ ರಸ್ತೆಗಳ ಅಭಿವೃದ್ಧಿ ಹಾಗೂ ಗ್ರಾಮ ಸಡಕ್ ಯೋಜನೆಯಡಿ ಹಳ್ಳಿಗಳ ರಸ್ತೆ ಡಾಂಬರೀಕರಣ, ಗ್ರಾಮೀಣ ಮತ್ತು ನಗರದ ಪ್ರದೇಶದ ಕುಡಿಯುವ ನೀರಿನ ತೀವ್ರ ಸಮಸ್ಯೆ ಇದ್ದು, ಶಾಶ್ವತ ಪರಿಹಾರಕ್ಕೆ ಆದ್ಯತೆ. ಹಾಸನ ತಾಲೂಕಿನ ಸೋಮನಹಳ್ಳಿ ಕಾವಲಿನಲ್ಲಿ ಆಲೂಗಡ್ಡೆ ಸಂಶೋಧನಾ ಕೇಂದ್ರ ಹಾಗೂ ಮಂಡಳಿ ಸ್ಥಾಪನೆ, ಒಣಗುತ್ತಿರುವ ತೆಂಗು, ಅಡಿಕೆ, ಮಾವಿನಮರ ಒಣಗದಂತೆ ತಡೆಯಲು ವಿಶೇಷ ಆದ್ಯತೆ - ಇವೇ ಮುಂತಾದ ಭರವಸೆಗಳನ್ನು ಪ್ರಮುಖವಾಗಿ ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಇವು ಹೊರತುಪಡಿಸಿದಂತೆ, ಮಲೆನಾಡು ರಸ್ತೆ ಅಭಿವೃದ್ಧಿಗಾಗಿ (ಪಶ್ಚಿಮಘಟ್ಟ) ವಿಶೇಷ ಅನುದಾನ ಬಿಡುಗಡೆಗೆ ಒತ್ತು, ಹೋಬಳಿ ಮಟ್ಟದಲ್ಲಿ ಕ್ರೀಡಾಂಗಣ ಸ್ಥಾಪನೆ ಮತ್ತು ಕ್ರೀಡೆಗೆ ಆದ್ಯತೆ, ವನ್ಯ ಜೀವಿ (ಆನೆ ಮತ್ತು ಚಿರತೆ) ಮತ್ತು ಮಾನವನ ಸಂಘರ್ಷದಲ್ಲಿ ಆಸ್ತಿ, ಪ್ರಾಣ, ಬೆಳೆಹಾನಿಗೆ ವೈಜ್ಞಾನಿಕ ಪರಿಹಾರ, ಜಿಲ್ಲೆಯ ಮೂಲಭೂತ ಸೌಕರ್ಯಗಳಿಗೆ ಆದ್ಯತೆ, ಹಾಸನ ಪ್ರವಾಸೋದ್ಯಮಕ್ಕೆ ಆದ್ಯತೆ ಹಾಗೂ ಹೆಚ್ಚಿನ ಅನುದಾನ, ವಿಶ್ವ ಪರಂಪರೆ ಖ್ಯಾತಿಯ ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಮತ್ತು ರಾಮನಾಥಪುರಕ್ಕೆ ಮೂಲಭೂತ ಸೌಕರ್ಯ, ಸ್ಪೈಸ್ ಪಾರ್ಕ್ ಸ್ಥಾಪನೆ, ಅಗ್ರಿ ಮಾರ್ಕ್ ಸ್ಥಾಪನೆ, ಮಂಗಳೂರು-ಬೆಂಗಳೂರು ಮಾರ್ಗ ಹೆಚ್ಚಿನ ರೈಲು ಸಂಚಾರಕ್ಕೆ ಆದ್ಯತೆ, ಕೃಷಿ ಆಧಾರಿತ ಕೈಗಾರಿಕೆ ವಿಶೇಷ ಒತ್ತು, ಯುವಕರಿಗೆ ಉದ್ಯೋಗ ಸೃಷ್ಟಿಸಲು ವಿಶೇಷ ಒತ್ತು, ಪರಿಶಿಷ್ಟ ಜಾತಿ, ಪಂಗಡ ಮತ್ತು ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಪ್ರತ್ಯೇಕ ಇಲಾಖೆಯಿಂದ ಅನುದಾನ ಬಿಡುಗಡೆಗೆ ಒತ್ತು, ನಗರದ ನಾಲ್ಕು ದಿಕ್ಕುಗಳಲ್ಲಿ ಮಾರುಕಟ್ಟೆ ಸ್ಥಾಪನೆ.
2013-14ನೇ ಸಾಲಿನ ಕಾಫಿ ಬೆಳೆ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವುದರಿಂದ ಬೆಳೆಗಾರರ ಬೆಳೆ ಸಾಲದ ಬಡ್ಡಿ ಮನ್ನಾ, ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು (ನದಿಗಳ ಮೂಲಗಳಿಂದ) ವಿಶೇಷ ಕಾಳಜಿ ನೀಡಲಾಗಿದೆ ಎಂದ ಅವರು, ಬಿಜೆಪಿಗೆ ತಮ್ಮ ಅಮೂಲ್ಯ ಮತ ನೀಡುವ ಮೂಲಕ ಗೆಲುವಿಗೆ ಸಹಕಾರಿಯಾಗಬೇಕು ಎಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

