ಹಾಸನ

ಗೌಡರಿಗೆ 3 ಲಕ್ಷ ಮತಗಳ ಅಂತರದ ಜಯ'

Published On :

ಬೇಲೂರು: ಗುರುವಾರ ನಡೆಯಲಿರುವ ಲೋಕಸಭಾ ಚುನಾಣೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಅಂತರದ ಬಹುಮತದೊಂದಿಗೆ ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಜಯಗಳಿಸಲಿದ್ದಾರೆ ಎಂದು ಮಾಜಿ ಪುರಸಭಾಧ್ಯಕ್ಷ ಬಿ. ಸಿ ಮಂಜುನಾಥ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಕೊನೆ ದಿನವಾದ ಮಂಗಳವಾರ ತಮ್ಮ ವಾರ್ಡಿನಲ್ಲಿ ಜೆಡಿಎಸ್ ಅಭ್ಯರ್ಥಿ ದೇವೇಗೌಡರ ಪರವಾಗಿ ಮತಯಾಚನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ದೇವೇಗೌಡರು ಭಾರಿ ಅಂತರದ ಮತಗಳಿಂದ  ಗೆಲ್ಲಲಿದ್ದು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಮಾಜಿ ಸಚಿವ ಎಚ್.ಡಿ. ರೇವಣ್ಣ ಮಾಡಿರುವ ಪ್ರಗತಿಪರ ಕೆಲಸಗಳು ಹಾಗೂ ದೇವೇಗೌಡರು ಸಂಸದರಾಗಿ ಅಭಿವೃದ್ಧಿಗಾಗಿ ನೀಡಿರುವ ಅನುದಾನಗಳು ಅವರಿಗೆ ಶ್ರೀರಕ್ಷೆಯಾಗಲಿದೆ. ತಾವು ವಾರ್ಡಿನಲ್ಲಿ ಮತಯಾಚನೆ ಮಾಡಿದ ಸಂದರ್ಭದಲ್ಲಿ ಬಹುತೇಕ ಮತದಾರರು ದೇವೇಗೌಡರ ಪರವಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು. ಈ ಸಂದರ್ಭಲ್ಲಿ ಜಿಪಂ ಸದಸ್ಯ ಹೇಮಾವತಿ ಮಂಜುನಾಥ್, ಮುಖಂಡ ತಾರಾನಾಥ್, ಸುನಿಲ್, ರಾಮು, ಬಾಬು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.