ಕಬ್ಬಿನ ಗದ್ದೆಯಲ್ಲಿ ಇಟ್ಟಿದ್ದ ಅಕ್ರಮ ಮದ್ಯ ವಶ
ಹಾಸನ: ಚನ್ನರಾಯಪಟ್ಟಣ ತಾಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ಇಡಲಾಗಿದ್ದ ಮದ್ಯವನ್ನು ಪಟ್ಟಣದ ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕರು ದಾಳಿ ನಡೆಸಿದ ಸಂದರ್ಭದಲ್ಲಿ ಗದ್ದೆಯಲ್ಲಿ 11 ನಾನಾ ಪ್ಲಾಸ್ಟಿಕ್ ಚೀಲಗಳಲ್ಲಿ ತಲಾ 180 ಮಿಲೀಯ 1100 ಟೆಟ್ರಾ ಪ್ಯಾಕ್‌ಗಳಲ್ಲಿ ಒಟ್ಟು 198 ಲೀಟರ್ ಮದ್ಯವನ್ನು ಸಂಗ್ರಹಿಸಿ ಇಡಲಾಗಿತ್ತು. ಇದರ ಒಟ್ಟು ಮೌಲ್ಯ ರು. 63,000 ಆಗಿದ್ದು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆದಿದೆ.
ಕೊಲೆ ನಡೆದ ಒಂದೇ ದಿನದಲ್ಲಿ ಆರೋಪಿಗಳ ಬಂಧನ
ಆಲೂರು: ಪಾಳ್ಯ ಹೋಬಳಿ ಸಿಂಗಾಪುರ ನಾಲೆ ಬಳಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದ ಗಣೇಶನನ್ನು ಕೊಲೆ ಮಾಡಲಾಗಿದ್ದು, ಒಂದೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಅಪಘಾತದಲ್ಲಿ ಸಾವಿಗೀಡಾಗಿದ್ದಾನೆಂದು ಮೃತನ ಪತ್ನಿ ದಾಕ್ಷಾಯಿಣಿ ಪೊಲೀಸರಿಗೆ ದೂರು ನೀಡಿದ್ದಳು. ದೂರನ್ನು ಆಧರಿಸಿ ಮೃತ ಶರೀರವನ್ನು ಪರೀಕ್ಷಿಸಿದಾಗ ಕುತ್ತಿಗೆ ಮೇಲೆ ಹಗ್ಗ ಬಿಗಿದ ಗುರುತು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ, ಇದು ಕೊಲೆ ಎಂಬ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದರು. ಮೃತನ ಪತ್ನಿ ದಾಕ್ಷಾಯಿಣಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಆರೋಪಿ ಪಟ್ಟಣದ ಶಬ್ಬೀರ್, ಶಾಂತಿಗ್ರಾಮದ ಬಾಬು ಎಂಬವರು ಗಣೇಶನನ್ನು ಕೊಲೆ ಮಾಡಿದ್ದಾರೆ ಎಂದು ಆಕೆ ತಿಳಿಸಿದ್ದಾಳೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಡಿಎಸ್ಪಿ ಕುಮಾರಸ್ವಾಮಿ ಮಾರ್ಗದರ್ಶದದಲ್ಲಿ ಪಿಐ ರವಿ ನೇತೃತ್ವದ ತನಿಖಾ ತಂಡವನ್ನು ರಚಿಸಿದರು. ಕಾರ್ಯಾಚರಣೆಗಿಳಿದ ಸಿಬ್ಬಂದಿ ಮಂಜುನಾಥ್, ಚಾಲಕ ಪುಟ್ಟಶೆಟ್ಟಿ ಅವರನ್ನೊಳಗೊಂಡ ತನಿಖಾ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು. ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವ್ಯಕ್ತಿ ನಾಪತ್ತೆ: ಪತ್ನಿ ದೂರು
ಆಲೂರು: ತಾಲೂಕಿನ ಕಬ್ಬಿನಹಳ್ಳಿ ಗ್ರಾಮದ ಸ್ವಾಮಿಶೆಟ್ಟಿ (38) ಎಂಬುವವರು ನಾಪತ್ತೆಯಾಗಿದ್ದಾರೆ. ಮಾ. 15ರಂದು ಬೆಳಗ್ಗೆ 10ರ ಸಮಯದಲ್ಲಿ ಹಾಸನಕ್ಕೆ ಹೋಗಿ ಬರುತ್ತೆನೆ ಎಂದು ಮನೆಯವರಿಗೆ ಹೇಳಿ ಹೋದವರು, ಅಂದಿನಿಂದ ಕಾಣೆಯಾಗಿದ್ದಾರೆ. ಪತ್ನಿ ನಾಗಮಣಿ ಈ ಸಂಬಂಧವಾಗಿ ಆಲೂರು ಪೋಲಿಸ್‌ಠಾಣೆಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

