ಅಂಬೇಡ್ಕರ್ ಸಿದ್ಧಾಂತ ಮೈಗೂಡಿಸಿ: ದಸಂಸ ಅಧ್ಯಕ್ಷ ಸುದರ್ಶನ್ ಕರೆ
ಬೇಲೂರು: ಪ್ರಸ್ತುತದಲ್ಲಿ ಯುವಕರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಸಂಘಟಿತರಾಗಲು ಮುಂದಾಗಬೇಕೆಂದು ದಲಿತ ಸಂಘರ್ಷ ಸಮಿತಿ ತಾಲೂಕು ಗೌರವಾಧ್ಯಕ್ಷ ಕೆ. ಸುದರ್ಶನ್ ತಿಳಿಸಿದರು.
ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕದ ವತಿಯಿಂದ ಟಿ.ಎ.ಪಿ.ಸಿ.ಎಂ.ಎಸ್ ಆವರಣದಲ್ಲಿ ಏರ್ಪಡಿಸಲಾಗಿದ್ದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಉಚಿತ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಪ್ರಪಂಚದಲ್ಲೇ ಉತ್ತಮವಾದ ಸಂವಿಧಾನ ರಚಿಸಿ, ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯ ಹಕ್ಕು ಸಲ್ಲುವುದಕ್ಕೆ ಕಾರಣೀಭೂತರಾದರು ಎಂದು ಹೇಳಿದರು.
ಮನವಿ: ಅಂಬೇಡ್ಕರ್ ಜಯಂತಿಯಂದು ಯುವಕರು ರಕ್ತದಾನ ಮಾಡುವ ಮೂಲಕ ತುರ್ತು ಸಂದರ್ಭದಲ್ಲಿ ಅನೇಕ ಜೀವಗಳನ್ನು ಉಳಿಸುವುದಕ್ಕೆ ಕಾರಣರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಯುವಕರು ಮುಂದೆ ಬಂದು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕೆಂದು ಮನವಿ ಮಾಡಿದರು.
ಮನೆಮನೆಗೆ ತಲುಪಿಸಬೇಕು: ಜಿಲ್ಲಾ ಮಹಿಳಾ ಸಂಚಾಲಕಿ ಟಿ.ಡಿ. ಸುಮಾ ಮಾತನಾಡಿ, ದಲಿತರು ಶಿಕ್ಷಿತರಾಗಿ ಉತ್ತಮ ಬೆಳವಣಿಗೆ ಹೊಂದಿದಾಗ ಮತ್ತು ಮಹಿಳೆಯರು ಸಂಘಟಿತರಾಗಿ ಹೋರಾಟಗಳಲ್ಲಿ ಭಾಗವಹಿಸಿದಾಗ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವೆಂದ ಅವರು, ಅಂಬೇಡ್ಕರ್ ವಿಚಾರಗಳನ್ನು ತಿಳಿದುಕೊಂಡು ಮನೆ, ಮನೆಗೆ ತಲುಪಿಸುವಂಹ ಕೆಲಸವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ಕಮಲಮ್ಮ, ತಾಲೂಕು ಪ್ರಧಾನ ಸಂಚಾಲಕ ಬಿ.ಎಲ್. ಲಕ್ಷ್ಮಣ್, ತಾಲೂಕು ಮಹಿಳಾ ಸಂಚಾಲಕಿ ಜಯಮ್ಮ, ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಸೋಮೇಶ್ ಎಂ.ಕೆ.ಆರ್. ಗೌರವಾಧ್ಯಕ್ಷ ಬೋಜೇಗೌಡ, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಉಪ ಪ್ರಧಾನ ಸಂಚಾಲಕ ರವಿಕುಮಾರ್, ಧರ್ಮಯ್ಯ, ಹಾಲಪ್ಪ, ಸತೀಶ್ ಹೊಯ್ಸಳ, ಕೃಷ್ಣಯ್ಯ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

