ಮರುಕಳಿಸಲಿದೆ1999ರ ಫಲಿತಾಂಶ
ಕ.ಪ್ರ. ವಾರ್ತೆ , ಹಾಸನ , ಏ. 21
ಹಾಸನ ಲೋಕಸಭಾ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ 1999ರ ಚುನಾವಣೆಯ ಫಲಿತಾಂಶ ಮರುಕಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಶಿವರಾಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ನ ಕಾರ್ಯಕರ್ತರು ಒಗ್ಗಟ್ಟು ಹಾಗೂ ಕೆಪಿಸಿಸಿ ಮತ್ತು ಎಐಸಿಸಿ ಸಹಕಾರದಿಂದ ಚುನಾವಣಾ ಪ್ರಚಾರ ನಡೆಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಇತರೆ ನಾಯಕರು ಬಂದು ಪ್ರಚಾರ ನಡೆಸಿ ಕಾಂಗ್ರೆಸ್ ಯೋಜನೆಯ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಟ್ಟಿದ್ದರು ಎಂದರು.
ಕಾಂಗ್ರೆಸ್ಗೆ ಬೆಂಬಲ: ಅನ್ನಭಾಗ್ಯ, ಕ್ಷೀರಭಾಗ್ಯ, ರು. 12 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಯೋಜನೆಯ ಮೂಲಕ ಬೇಲೂರು, ಅರಸೀಕೆರೆ, ಚನ್ನರಾಯಪಟ್ಟಣಕ್ಕೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಒಂದೂವರೆ ವರ್ಷಗಳಲ್ಲಿ ನೀರು ಒದಗಿಸಲಾಗುತ್ತದೆ. ಅಭಿವೃದ್ಧಿಯ ಕೆಲಸಗಳನ್ನು ನೋಡಿ ಜಿಲ್ಲೆಯ ಜನತೆ ಕಾಂಗ್ರೆಸನ್ನು ಬೆಂಬಲಿಸಲಿದ್ದಾರೆ ಎಂದರು.
ಆರೋಪ: ಕಾಡಾನೆ ಸಮಸ್ಯೆ, ಬರಪೀಡಿತ ಪ್ರದೇಶಗಳ ಪರಿಹಾರ ಕಾಮಗಾರಿ, 5 ಲಕ್ಷ ತೆಂಗಿನ ಮರಗಳು ನಾಶವಾಗಿದ್ದರೂ ಸಹ ಜೆಡಿಎಸ್ ಅಧಿಕಾರವಧಿಯಲ್ಲಿ ಯಾವುದೇ ಪರಿಹಾರ ಕಾಮಗಾರಿಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.
1999ರ ಫಲಿತಾಂಶ: ಐಐಟಿ, ಸೆಂಟ್ರಲ್ ಯೂನಿವರ್ಸಿಟಿ, ವಿಮಾನ ನಿಲ್ದಾಣಗಳನ್ನು ಮಾಡಲು ಸಾಧ್ಯವಾಗದ ಜೆಡಿಎಸ್ನವರಿಗೆ ಜಿಲ್ಲೆಯ ಜನತೆ ಕೈ ಹಿಡಿಯುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನಗಳಲ್ಲಿ ಕೇವಲ ರಸ್ತೆ ಅಭಿವೃದ್ಧಿಗೆ ರು. 750 ಕೋಟಿ ನೀಡಲಾಗಿದೆ. ನಾನಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿರುವಂತಹ ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂದರು.
ಜೆ.ಪಿ.ಎ. ಜಯಣ್ಣ ತಮ್ಮನ್ನು ಟೀಕಿಸಿದ್ದರ ಕುರಿತು ಮಾತನಾಡಿದ ಶಿವರಾಂ, ಜಯಣ್ಣ ಮೊದಲಾಗಿ ಕಾಂಗ್ರೆಸ್ಗೆ ಸೇರಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ನಮ್ಮದೇ ಆದ ಬದ್ಧತೆ ಹೊಂದಿದ್ದೇವೆ. ಆದ್ದರಿಂದ ಅವರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ನಾರಾಯಣಗೌಡ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

