ಕಠಿಣ ಪರಿಶ್ರಮದಿಂದ ಗುರಿ ಸಾಧನೆ ಸಾಧ್ಯ
ಕ.ಪ್ರ. ವಾರ್ತೆ , ಅರಸೀಕೆರೆ , ಏ. 21
ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮದಿಂದ ಮಾತ್ರ ನಿಶ್ಚಿತ ಗುರಿ ಸಾಧಿಸಲು ಸಾಧ್ಯವಿರುವ ಕಾರಣ ಉನ್ನತ ಆದರ್ಶಗಳ ಗುರಿಯನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ಉದ್ಯಮಿ ಹಾಗೂ ರೋಟರಿ ಮಾಜಿ ಅಧ್ಯಕ್ಷ ಕೆ.ಎಸ್. ವಿಶ್ವನಾಥ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ ಹಾಗೂ ಪ್ರಥಮ ವಾರ್ಷಿಕ ಸಂಚಿಕೆ ಬಿಂಬ ಬಿಡುಗಡೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಿವಿಮಾತು: ವಿದ್ಯಾರ್ಥಿ ಜೀವನ ಮಹತ್ವರವಾದುದ್ದು ಎಂದ ಅವರು, ಇಂತಹ ಸಂದರ್ಭದಲ್ಲಿ ಬೇರಡೆಗೆ ಮನಸ್ಸನ್ನು ಹರಿಯ ಬಿಡದೇ ವಿದ್ಯಾರ್ಜನೆ ಕಡೆಗೆ ಹೆಚಿನ ಗಮನ ಹರಿಸಿ, ರಾಷ್ಟ್ರೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆದರ್ಶ ವ್ಯಕ್ತಿಗಳಾಗಬೇಕು ಎಂದು ಕಿವಿಮಾತು ಹೇಳಿದರು.
ಆತಂಕಕಾರಿ: ಡಾ. ಎಚ್.ಎಸ್. ಸುರೇಶ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಜೀವನದ ಆದರ್ಶ, ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಇತ್ತೀಚಿಗೆ ಯುವಕರು ಅನೇಕ ದುಶ್ಚಟಗಳಿಗೆ ದಾಸರಾಗಿ ಎಚ್.ಐ.ವಿ.ಯಂತಹ ಮಾರಕ ರೋಗಕ್ಕೆ ತುತ್ತಾಗುತ್ತಿರುವುದು ಆತಂಕಕಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸೈಯದ್ ಭಾಷ ವಹಿಸಿದ್ದರು. ಸಾಂಸ್ಕತಿಕ ಸಂಚಾಲಕರಾದ, ಸುಬ್ರಮಣಿ ಎಸ್.ವಿ. ಸ್ವಾಗತಿಸಿದರು, ಎನ್.ಎಸ್.ಎಸ್. ಮತ್ತು ರೆಡ್ಕ್ರಾಸ್ ಸಂಚಾಲಕ ಕೆ.ಎಸ್. ವಿಶ್ವನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡಾ ಮತ್ತು ಸ್ಕೌಟ್ಸ್, ಗೈಡ್ಸ್ ಸಂಚಾಲಕ ನಾಗರಾಜು ವಂದಿಸಿದರು. ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ಮಹಾಲಕ್ಷ್ಮಿ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಕೆ.ಎಂ. ಈಶ್ವರಪ್ಪ, ಎಸ್. ಮಂಜುನಾಥ, ರೋಟರಿ ಸಂಸ್ಥೆ ಅಧ್ಯಕ್ಷ ಪ್ರವೀಣ್ ಕುಮಾರ್, ಕಾಲೇಜಿನ ಸಿಬ್ಬಂದಿ, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

