ಆಯುಕ್ತರ ವಿರುದ್ಧ ಜೆಡಿಎಸ್ ಗರಂ
ಹಾಸನ: ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣದ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಗರಸಭೆ ಆಯುಕ್ತರು ಬುಧವಾರ ಕರೆದಿದ್ದ ಸಭೆಯಲ್ಲಿ ನಗರಸಭೆ ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿ ಸಭೆಯಿಂದ ಹೊರಬಂದ ಘಟನೆ ನಡೆಯಿತು. ಆಯುಕ್ತರು ಬೇಜವಾಬ್ದಾರಿ ಹಾಗೂ ಅಧಿಕಾರದ ದರ್ಪದಿಂದ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಸದಸ್ಯರು ದೂರಿದರು.
ನಗರಸಭೆ ಆಯುಕ್ತ ಕೃಷ್ಣಮೂರ್ತಿ ಅವರು, ನಗರದಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ ಸಭೆಯನ್ನು ಕರೆದಿಲ್ಲ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಭೆ ಕರೆದಿದ್ದಾರೆ. ಇದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಕುಡಿಯುವ ಸಮಸ್ಯೆ ಬಗೆಹರಿಸಲು ಈ ಮೊದಲೇ ಸಭೆ ಕರೆಯಬಹುದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಲದೇ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಗೌರವ ನೀಡುವುದಿಲ್ಲ ಎಂದು ಜೆಡಿಎಸ್ ಸದಸ್ಯರು ಸಭೆ ಪ್ರಾರಂಭದಲ್ಲಿಯೇ ಅಕ್ರೋಶ ವ್ಯಕ್ತಪಡಿಸಿದರು. ಇತ್ತ ಆಯುಕ್ತರ ಮೇಲೆ ಜೆಡಿಎಸ್ ಸದಸ್ಯರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ದೂರುತ್ತಾ ಹೊರನಡೆದರು.
ಆರೋಪ: ಅಧ್ಯಕ್ಷೆ ಶ್ರೀವಿದ್ಯಾ, ಉಪಾಧ್ಯಕ್ಷ ಇರ್ಷಾದ್ ಪಾಷ, ಸದಸ್ಯ ಅನಿಲ್ ಕುಮಾರ್ ಸೇರಿದಂತೆ ಇತರರು ಮಾತನಾಡಿ, ನಗರಸಭೆ ಆಯುಕ್ತರು ಅಧ್ಯಕ್ಷರಿಗಾಗಲೀ, ಉಪಾಧ್ಯಕ್ಷರಿಗಾಗಲಿ ಅಥವಾ ಸದಸ್ಯರಿಗಾಗಲಿ ಗೌರವ ನೀಡುತ್ತಿಲ್ಲ. ನಮ್ಮ ಮಾತಿಗೆ ಬೆಲೆ ನೀಡುತ್ತಿಲ್ಲ. ಅಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಪೌರ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಕೈವಾಡವೇನು?: ಈ ಹಿಂದೆ ಬೀದಿ ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆಗೆ ರು. 800 ನೀಡಲಾಗುತ್ತಿತ್ತು. ಈಗ ಪಶು ವೈದ್ಯಕೀಯ ಕಾಲೇಜಿನವರು ರು. 553 ಶಸ್ತ್ರಚಿಕಿತ್ಸೆ ನೀಡುವುದಾಗಿ ಮುಂದೆ ಬಂದಿದ್ದರೂ ಅವರಿಗೆ ಕಳೆದ 3 ತಿಂಗಳಿನಿಂದ ಅನುಮತಿ ನೀಡದೆ ವಂಚಿಸುತ್ತಿದ್ದಾರೆ. ಕಡಿಮೆ ಹಣದಲ್ಲಿ ಚಿಕಿತ್ಸೆಗೆ ಮುಂದಾಗಿದ್ದರೆ ಅದಕ್ಕೆ ಆಯುಕ್ತರು ಅಡ್ಡಿ ಪಡಿಸುತ್ತಿದ್ದಾರೆ. ಇದರ ಹಿಂದಿರುವ ಕೈವಾಡವೇನು ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

