ಜೆಡಿಎಸ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಹಾಸನ: ನಗರಸಭೆ ಆಯುಕ್ತ ಕೃಷ್ಣಮೂರ್ತಿ ಅವರೊಂದಿಗೆ ಜೆಡಿಎಸ್ ನಗರಸಭೆ ಸದಸ್ಯರು ಏಕವಚನ ಬಳಸಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ನಗರಸಭೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ಸಾರ್ವಜನಿಕರ ಹಿತದೃಷ್ಟಿಯಿಂದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ವಿಚಾರವಾಗಿ ಸಭೆ ಕರೆಯಲಾಗಿತ್ತು. ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಹಿರಿಯ ನಾಗರಿಕರು, ಪ್ರಾಣಿ ದಯಾ ಸಂಘದ ಸದಸ್ಯರೊಂದಿಗೆ ಮಾತುಕತೆ ನಡೆ ಉದ್ದೇಶಿಸಲಾಗಿತ್ತು. ಸಭೆಯಲ್ಲಿ, ನಗರಸಭೆ ಉಪಾಧ್ಯಕ್ಷ ಇರ್ಷಾದ್ ಪಾಷ ಹಾಗೂ ಸದಸ್ಯ ಎಚ್.ಎಸ್. ಅನಿಲ್ ಕುಮಾರ್ ವೇದಿಕೆ ಮುಂಬಾಗ ಹೋಗಿ ಆಯುಕ್ತರಿಗೆ ಏಕವಚನದಲ್ಲಿ ಮಾತನಾಡಿ, ಬೆದರಿಕೆ ಹಾಕಿ, ಅವಾಚ್ಯ ಪದಗಳಿಂದ ನಿಂದಿಸಿದರು ಎಂದು ದೂರಿದರು.
ಅಲ್ಲದೇ, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯರಾದ ಯಶವಂತ್, ಇಂದುಮತಿ, ರಮೇಶ್ ಬಾಬು, ಅಬ್ದುಲ್ ರಹೀಮ್, ಆರೀಫ್ ಖಾನ್, ಕುಮಾರ್, ಎಚ್.ರವಿ, ಕಾಂಗ್ರೆಸ್ ಮುಖಂಡರಾದ ಮಹಂತೇಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

