ರೇವಣಸಿದ್ದೇಶ್ವರ ರಥೋತ್ಸವ
ಅರಸೀಕೆರೆ: ತಾಲೂಕಿನ ಬಂಡಿಹಳ್ಳಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಸ್ವಾಮಿಯವರ ರಥೋತ್ಸವ ಮಂಗಳವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.
ಏ.21ರ ಸೋಮವಾರ ಬೆಳಗ್ಗೆಯಿಂದಲೇ ಕೆಂಡ ಹಾಯುವುದು, ಮೆರವಣಿಗೆ, ಉತ್ಸವಾದಿ ವೈಗರೆಗಳು ನೆರವೇರಿದರೆ ಮಂಗಳವಾರ ಮಧ್ಯಾಹ್ನ ಶ್ರೀ ಸ್ವಾಮಿಯವರಿಗೆ ವಿಶೇಷ ಪೂಜಾ ಕೈಕಂರ್ಯಗಳು ನೆರವೇರಿದ ನಂತರ ಮಹಾ ಮಂಗಳಾರತಿ ನೆರವೇರಿಸಿ 2.30ಕ್ಕೆ ಸರಿಯಾಗಿ ರೇವಣ್ಣಸಿದ್ದೇಶ್ವರ ಸ್ವಾಮಿಯವರ ರಥಕ್ಕೆ ತೆಂಗಿನಕಾಯಿಯನ್ನು ಈಡುಗಾಯಿ ಹೊಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಜಾತ್ರೆಯಲ್ಲಿ ನೆರೆದಿದ್ದ ಅಸಂಖ್ಯಾತ ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಎಸೆಯುವ ಮೂಲಕ ಭಕ್ತಿ ಪರಾಕಾಷ್ಠೆ ಪ್ರದರ್ಶಿಸಿದರು. ಶ್ರೀ ಕ್ಷೇತ್ರದ ಸುತ್ತಮುತ್ತಲಿನ ಹಳ್ಳಿಗಳಾದ ಸೂಳೆಕೆರೆ, ಲಕ್ಷ್ಮಿದೇವರಹಳ್ಳಿ, ಬೊಮ್ಮೇನಹಳ್ಳಿ, ದುಮ್ಮೇನಹಳ್ಳಿ, ಅಗ್ಗುಂದ, ಸಿದ್ದರಹಳ್ಳಿ ಸೇರಿದಂತೆ ಹತ್ತಾರು ಗ್ರಾಮಗಳ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಇದ್ದರು. ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಕಲ್ಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

