ಹಾಸನ

'ಕೆರೆಗೆ ಹಾರ'ವಾದ ರಸ್ತೆ!

Published On :

ಅರಸೀಕೆರೆ: ಅರಸೀಕೆರೆ ಪಟ್ಟಣದಿಂದ ಅಂಚೆಕೊಪ್ಪಲು ಮಾರ್ಗವಾಗಿ ಜಾವಗಲ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಅವ್ಯವಸ್ಥೆಯಿಂದಾಗಿ ಪ್ರಯಾಣಿಕರು, ವಾಹನ ಸವಾರರು ಸಂಕಷ್ಟ ಎದುರಿಸಬೇಕಾಗಿದೆ ಎಂದು ಈ ಭಾಗದಲ್ಲಿ ಸಂಚರಿಸುವ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅಂಚೆಕೊಪ್ಪಲು ಕೆರೆ ಅಭಿವೃದ್ಧಿಗೆ ಲಕ್ಷಾಂತರ ರು.ಗಳ ಅನುದಾನ ಬಿಡುಗಡೆಯಾಗಿದೆ. ಆದರೆ, ಕೆರೆಯಿಂದ ಎತ್ತಿದ ಹೂಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಗೋಜಿಗೆ ಹೋಗದ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಅದನ್ನು ತಂದು ರಸ್ತೆಯ ಬದಿಗೆ ಸುರಿದಿದ್ದಾರೆ.
ಅಲ್ಲದೇ, ಕೆರೆಗೆ ಸಂಪರ್ಕ ಕಲ್ಪಿಸುವ ಕೊಳವೆಗಳನ್ನು ಸಮರ್ಪಕವಾಗಿ ಅಳವಡಿಸದೇ ಇರುವುದರಿಂದ ಮಳೆಯ ನೀರು ಸಂಪೂರ್ಣ ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ. ಇದರಿಂದಾಗಿ, ಪಾದಚಾರಿಗಳು, ವಾಹನ ಸವಾರರು ತೀವ್ರ ತೊಂದರೆ ಎದುರಿಸುವಂತಾಗಿದೆ. ಆದರೆ ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸದೆ ಗಾಢನಿದ್ರೆಗೆ ಜಾರಿದ್ದಾರೆ ಎಂದು ಕಿಡಿಕಾರ ತೊಡಗಿದ್ದಾರೆ.
ಸ್ಥಳೀಯ ಜಾಜೂರು ಗ್ರಾಮ ಪಂಚಾಯ್ತಿ  ಕೂಡಲೇ ಅವ್ಯವಸ್ಥೆ ಸರಿಪಡಿಸದಿದ್ದರೆ ಗ್ರಾಮ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.