'ಅಂಬೇಡ್ಕರ್ ಒಂದು ವರ್ಗಕ್ಕೆ ಸೀಮಿತವಲ್ಲ'
ಬೇಲೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಒಂದು ವರ್ಗಕ್ಕೆ ಸೀಮಿತವಾದವರಲ್ಲ. ಅವರ ತತ್ವ ಸಿದ್ಧಾಂತಗಳು ಇಂದಿಗೂ ಆದರ್ಶವಾಗಿದ್ದು ಪ್ರತಿಯೊಬ್ಬರು ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಪಾಲಿಸಬೇಕು ಎಂದು ಶಾಸಕ ವೈ.ಎನ್. ರುದ್ರೇಶ್ ಗೌಡ ತಿಳಿಸಿದರು.
ತಾಲೂಕಿನ ದೊಡ್ಡಬ್ಯಾಡಿಗೆರೆ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೋಷಿತ ಸಮುದಾಯಗಳು ಸಮಾಜದಲ್ಲಿ ಸಮಾನತೆ ಪಡೆಯಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಆದ್ದರಿಂದ ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.
ಸಲಹೆ: ಡಾ. ಅಂಬೇಡ್ಕರ್ ಅವರು ಈ ದೇಶದ ಮೊದಲ ಕಾನೂನು ಮಂತ್ರಿಯಾಗಿದ್ದವರು ಹಾಗೂ ಪ್ರಪಂಚದಲ್ಲೇ ಉತ್ತಮ ಸಂವಿಧಾನವನ್ನು ಬರೆದು ಸಂವಿಧಾನ ಶಿಲ್ಪಿಯಾದರು. ಸಂವಿಧಾನದಲ್ಲಿ ಶೋಷಿತ ಸಮುದಾಯಗಳಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲು ಕಲ್ಪಿಸಿಕೊಟ್ಟು ಮಹಾನ್ ಚೇತನವಾಗಿ ಬೆಳಗಿದವರು. ಅವರು ಬರೆದಿರುವ ಸಾಕಷ್ಟು ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಬೇಕು ಎಂದು ಅವರು ಸಲಹೆ ನೀಡಿದರು.
ಭವನಕ್ಕೆ ಅನುದಾನ: ದೊಡ್ಡಬ್ಯಾಡಿಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಶಾಸಕರ ನಿಧಿಯಿಂದ ಹಣವನ್ನು ಕೊಡಲಾಗುವುದು ಮತ್ತು ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತುಕೊಟ್ಟು ಕೆಲಸ ಮಾಡಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ಪ್ರಗತಿಪರ ಸಂಘಟನೆಯ ಗೌರವಾಧ್ಯಕ್ಷ ಕೆ. ಸುದರ್ಶನ್ ಮಾತನಾಡಿ, ಅಂಬೇಡ್ಕರ್ ಈ ದೇಶದ ಶೋಷಿತ ಸಮುದಾಯಗಳಿಗೆ ಸೂರ್ಯನಿದ್ದಂತೆ, ಸೂರ್ಯ ಯಾವಾಗಲು ಪ್ರಕಾಶ ಮಾನವಾಗಿ ಬೆಳಗುತ್ತಿರುತ್ತದೆಯೋ ಹಾಗೆ ಅಂಬೇಡ್ಕರ್ ಅವರು ಯಾವಾಗಲೂ ಪ್ರಕಾಶಿಸುತಿರುತ್ತಾರೆ ಹಾಗೂ ಅಂಬೇಡ್ಕರ್ ಭಾರತದ ಶಬ್ದಕೋಶವಿದ್ದಂತೆ ಎಂದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ದೊಡ್ಡವೀರೇಗೌಡ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಪ್ರಧಾನ ಸಂಚಾಲಕ ಲಕ್ಷ್ಮಣ್ ಮಾತನಾಡಿದರು. ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಪರಮೇಶ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಉಪ ಪ್ರಧಾನ ಸಂಚಾಲಕ ರವಿಕುಮಾರ್. ಕಾರ್ಯದರ್ಶಿ ನಾಗರಾಜು, ದಿನೇಶ್ ಗ್ರಾಮದ ಹಿರಿಯರಾದ ಜವರಯ್ಯ, ಚಂದ್ರಯ್ಯ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

