ಸಾಂಪ್ರದಾಯಿಕ ಪರಂಪರೆ ಉಳಿಸಿ
ಹಾಸನ: ಹಿಂದಿನ ಸಾಂಪ್ರದಾಯಕ ಪರಂಪರೆಯನ್ನು ಯುವಕರು ಉಳಿಸಿ, ಬೆಳೆಸಬೇಕೆಂದು ಎನ್.ಡಿ.ಆರ್.ಕೆ. ಕಾಲೇಜಿನ ಪ್ರಾಂಶುಪಾಲ ಕೆ. ಶಾಮ್ಭಟ್ ಕರೆ ನೀಡಿದರು.
ನಗರದ ಎನ್.ಡಿ.ಆರ್.ಕೆ. ಕಾಲೇಜ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಾಂಪ್ರದಾಯಿಕ ಆಚರಣೆ ಹಾಗೂ ಸುಗ್ಗಿ ಸಂಭ್ರಮ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಪರಂಪರೆ ಉಳಿಸಿ ಬೆಳೆಸಲು ಮುಂದಾಗಬೇಕು ಎಂದರು.
ಕಿವಿಮಾತು: ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಹಾಕಲಾಗುತ್ತಿದ್ದ ಅವರ ಉಡುಗೆ- ತೊಡುಗೆಗಳನ್ನು ಯುವಕರು ಈಗ ಮತ್ತೆ ತೊಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಸಂತೋಷ ವ್ಯಕ್ತಪಡಿಸಿದ ಅವರು, ಪದ್ಧತಿ ಹಾಗೂ ಆಚರಣೆಗಳಲ್ಲಿ ಗಟ್ಟಿತನ ಬೆಳೆಸಿಕೊಳ್ಳಬೇಕು. ಪ್ರಸ್ತುತದಲ್ಲಿ ಹೊಸ ಹೊಸ ತಂತ್ರಜ್ಞಾನ ಬಂದರೂ ಈಗಿನ ಪೀಳಿಗೆಗೆ ಎಷ್ಟು ಬೇಕೋ ಅಷ್ಟನ್ನು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು ತಮ್ಮದೇ ಆದ ಉಡುಗೆ ಹಾಕಿಕೊಳ್ಳುವುದರ ಮೂಲಕ ಗ್ರಾಮೀಣ ಸೊಗಡಿನ ಸಂಭ್ರಮವನ್ನು ತಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಜೈರಾಮ್, ಆಂಗ್ಲ ಮಾಧ್ಯಮ ವಿಭಾಗದ ಮನ್ವಾಚಾರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

