ಹಾಸನ

ಅಭಿವೃದ್ಧಿಗಾಗಿ ಸರ್ಕಾರದ ಕಡೆ ನೋಡಬೇಡಿ

Published On :

ನುಗ್ಗೇಹಳ್ಳಿ: ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಯೋಜನೆಗಳನ್ನು ಪ್ರಕಟಿಸಿದೆ ಜಾಗೃತರಾಗಿ ಸೌಲಭ್ಯ ಪಡೆದು ನಿಮ್ಮ ಜೀವನ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಗೀತಾ ಗೋಪಾಲಸ್ವಾಮಿ ಹೇಳಿದರು.
ಅವರು ಇಲ್ಲಿಗೆ ಸಮೀಪದ ವಿರುಪಾಕ್ಷಿಪುರದ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಗುರುವಾರ ಏರ್ಪಡಿಸಿದ್ದ ಅಂಬೇಡ್ಕರ್ ಅವರ 123ನೇ ಜನ್ಮದಿನಾಚರಣೆಯಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ 107ನೇ ಜನ್ಮ ದಿನಾಚರಣೆ  ಉದ್ಘಾಟಿಸಿ ಮಾತಾನಾಡಿದರು.
ತಂದೆ, ತಾಯಂದಿರು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ. ಮೊರಾರ್ಜಿ, ಚನ್ನಮ್ಮ ವಸತಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಿ ಗುಣಮಟ್ಟದ ಶಿಕ್ಷಣಕೊಡಿಸಿ ಎಂದು ಸಲಹೆ ನೀಡಿದರು.
ಉತ್ತಮರನ್ನು ಆಯ್ಕೆ ಮಾಡಿ: ಮಾದಿಗ ದಂಡೋರದ ಜಿಲ್ಲಾಧ್ಯಕ್ಷ ಸಿ.ಎನ್. ಮಂಜುನಾಥ್ ಮಾತನಾಡಿ, ಬಡವರ ಅಭಿವೃದ್ಧಿಕೆಲಸ ಮಾಡಿಕೊಡುವ ಉತ್ತಮ ಅಭ್ಯರ್ಥಿಗಳನ್ನು ಚುನಾವಣೆಗಳಲ್ಲಿ ಆರಿಸಿಕೊಳ್ಳಬೇಕು. ಆಗ ದಲಿತರ, ಶೋಷಿತರ ಅಭಿವೃದ್ಧಿಯಾಗುತ್ತದೆ ಎಂದರು.
ಸಮಾರಂಭದಲ್ಲಿ ಸ್ವತಂತ್ರ್ಯ ಹೋರಾಟಗಾರ ಮುಡಲಗಿರಿಯ್ಯ, ಸಾಹಿತಿ ಬೆಳಗುಲಿ ಕೆಂಪಯ್ಯ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಗೋಪಾಲ್, ಗ್ರಾಪಂ ಉಪಾಧ್ಯಕ್ಷ   ಯಲಯ್ಯ, ಮಂಗಳಮ್ಮ, ಯಶೋಧಾ ಧನಂಜಯ ಕರಿಯಣ್ಣ, ನರಸಿಂಹಯ್ಯ, ಸಂಘದ ಅಧ್ಯಕ್ಷ ಮೂರ್ತಿ, ಕಾರ್ಯದರ್ಶಿ ನಾಗರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.