ಕಾರು ಮೇಲೆ ಕೊಂಬೆ ಬಿದ್ದು ಇಬ್ಬರು ಸಾವು
ಅರಸೀಕೆರೆ: ಭಾರೀ ಪ್ರಮಾಣದಲ್ಲಿ ಗಾಳಿ ಬೀಸಿದ ಪರಿಣಾಮ, ಬೃಹತ್ ಗಾತ್ರದ ಆಲದ ಮರದ ಕೊಂಬೆಯೊಂದು ಕಾರಿನ ಮೇಲೆ ಬಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, 3 ವರ್ಷದ ಮಗು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ರುದ್ರನಹಳ್ಳಿ ಗೇಟ್ ಬಳಿ ಶನಿವಾರ ಸಂಜೆ ನಡೆದಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಯೋಗೇಶ್ (45) ಹಾಗೂ ಕಾರಿನ ಚಾಲಕರು ಮೃತಪಟ್ಟಿದ್ದಾರೆ. ನಾರಾಯಣಪ್ಪ (65), ಭಾಗ್ಯಮ್ಮ (55), ಪ್ರತಿಮಾ (25), ಉಲ್ಲಾಸ್ (3) ಗಾಯಗೊಂಡವರು. ಎಲ್ಲರೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಂಬಂಧಿಗಳು. ಮಂಡ್ಯದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಭಾರಿ ಗಾಳಿ ಬೀಸುತ್ತಿದ್ದ ಪರಿಣಾಮ, ರುದ್ರನಹಳ್ಳಿಗೇಟ್ ಬಳಿಯ ಆಲದ ಮರದಡಿ ಕಾರ್ ನಿಲ್ಲಿಸಿದ್ದಾರೆ. ಆ ವೇಳೆ ಆಲದ ಮರದ ಕೊಂಬೆ ಬಿದ್ದ ಪರಿಣಾಮ, ಕಾರಿನಲ್ಲಿ ಕುಳಿತ್ತಿದ್ದ ಯೋಗೇಶ್ಮ್‌ತ್ತು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಭಾಗ್ಯಮ್ಮ ಮತ್ತು ನಾರಾಯಣಪ್ಪ ಅವರನ್ನು ಹಾಸನದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಪ್ರತಿಮಾ ಹಾಗೂ ಉಲ್ಲಾಸ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

