'ಕೋಚಿಂಗ್ ಕೇಂದ್ರಗಳ ಸಮರ್ಪಕ ಬಳಕೆಯಾಗಲಿ'
ಅರಸೀಕೆರೆ: ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಕೋಚಿಂಗ್ ಕೇಂದ್ರಗಳು ಆರಂಭಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಗ್ರಾಮೀಣ ಹಾಗೂ ಪಟ್ಟಣ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮಾಡಾಳು ಶಿವಲಿಂಗಪ್ಪ ಕಿವಿಮಾತು ಹೇಳಿದರು.
ಪಟ್ಟಣದ ಬಸ್ ನಿಲ್ದಾಣದ ಸಮೀಪ ಶುಕ್ರವಾರ ನೂತನವಾಗಿ ಆರಂಭಗೊಂಡ ಜೇನುಗೂಡು ಸಿಇಟಿ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಪರೀಕ್ಷಾ ತರಬೇತಿ ಕೇಂದ್ರಗಳಲ್ಲಿ ಪಾಲ್ಗೊಂಡು ಶ್ರದ್ಧೆ, ಪರಿಶ್ರಮದಿಂದ ವ್ಯಾಸಂಗ ಮಾಡಿದರೆ ಬದುಕು ಸಾರ್ಥಕವಾಗಲಿದೆ. ಈ ನಿಟ್ಟಿನಲ್ಲಿ ಜೇನುಗೂಡು ಪರೀಕ್ಷಾ ಕೇಂದ್ರವು ತಮ್ಮಗಳ ಉಜ್ವಲ ಭವಿಷ್ಯಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ. ಇದರ ಲಾಭ ಪಡೆದುಕೊಳ್ಳಬೇಕು. ಹಾಗೇಯೇ ಪರೀಕ್ಷಾ ಕೇಂದ್ರಗಳು ಹಣ ಗಳಿಸುವ ಏಕೈಕ ಉದ್ದೇಶ ಕೈಬಿಟ್ಟು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಅವಕಾಶ ನೀಡಬೇಕೆಂದು ಸಲಹೆ ನೀಡಿದರು. ಪತ್ರಕರ್ತರ ಸಂಘದ ಕಾರ್ಯದರ್ಶಿ ಪಿ.ಶಾಂತಕುಮಾರ್, ಹಿರಿಯ ಪತ್ರಕರ್ತ ಎಚ್.ಡಿ.ಸೀತಾರಾಮ್, ಮೋಹನ್ಕುಮಾರ್, ತರಬೇತಿ ಕೇಂದ್ರ ಮುಖ್ಯಸ್ಥ ಲೋಕೇಶ್, ವಿನಯ್, ಮಂಜುನಾಥ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

