ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಸೂಚನೆ
ಹಾಸನ: ನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನತೆ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಬೀದಿ ನಾಯಿಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಮುಂದಾಗಿದ್ದು, ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸಿ ಅದೇ ಸ್ಥಳಕ್ಕೆ ಬಿಡುವ ಜವಾಬ್ದಾರಿ ವಹಿಸಲು ಅಲ್ಪಾವಧಿ ಟೆಂಡರ್ ಕರೆಯಲು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಅವರು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಏ. 25ರಂದು ಬೀದಿ ನಾಯಿಗಳ ಹಾವಳಿಗಳ ನಿಯಂತ್ರಣ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲು ತಂಡವಿದ್ದು, ಶಸ್ತ್ರ ಚಿಕಿತ್ಸೆ ನಂತರ ಅವುಗಳ ಆರೈಕೆ ಮಾಡಲು ಸ್ವಯಂ ಸೇವಾ ಸಂಸ್ಥೆಗಳು ಸಿದ್ಧರಿದ್ದಾರೆ. ಆದರೆ ನಾಯಿಗಳನ್ನು ಹಿಡಿಯಲು ಸಮಸ್ಯೆ ಇರುವುದರಿಂದ ಈ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸಲು ಟೆಂಡರ್ ಕರೆಯುವುದೇ ಸೂಕ್ತವೆಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಸಂದರ್ಭದಲ್ಲಿ, ಸ್ವಯಂ ಸೇವಾ ಸಂಸ್ಥೆಗಳು ಸಹಕಾರ ನೀಡಲು ಮುಂದೆ ಬಂದಿರುವುದಕ್ಕೆ ಜಿಲ್ಲಾಧಿಕಾರಿ ಅವುಗಳಿಗೆ ಅಭಿನಂದಿಸಿದರು.
ಅಧಿಕಾರಿಗಳಿಗೆ ಸೂಚನೆ: ರಸ್ತೆಯಲ್ಲಿ ಬಿಡಾಡಿ ದನಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ರಸ್ತೆ ಅಪಘಾತಕ್ಕೂ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ, ಬಿಡಾಡಿ ದನಗಳ ಕುರಿತಂತೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅನ್ಬುಕುಮಾರ್, ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು. ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ರಾಮಚಂದ್ರ, ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕ ಸಂಜೀವೆಗೌಡ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪಲ್ಲವಿ, ನಗರ ಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆನಂದ್, ಪಶು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು, ಸ್ವಯಂ ಸೇವಾ ಸಂಸ್ಥೆಯ ಡಾ. ಗುರುರಾಜ್ ಹೆಬ್ಬಾರ್, ಎಚ್.ಎಂ. ಶಿವಣ್ಣ ಹಾಗೂ ಇನ್ನಿತರೆ ಪದಾಧಿಕಾರಿಗಳು ಮತ್ತು ನಾನಾ ಅಧಿಕಾರಿಗಳು ಸಭೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

