ಹಾಸನ

ಸಾಂಸ್ಕೃತಿಕ ಕಲೆಯಿಂದ ಮಕ್ಕಳ ಅಭಿವೃದ್ಧಿ

Published On :

ಚನ್ನರಾಯಪಟ್ಟಣ: ಮಕ್ಕಳಲ್ಲಿ ವ್ಯಾಸಂಗದ ಜತೆಗೆ ಸಾಂಸ್ಕೃತಿಕ ಕಲೆ ಮೂಡಿಸುವುದರಿಂದ ಅವರ ಸರ್ವೋತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಪ್ರತಿಮಾ ಟ್ರಸ್ಟ್‌ನ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ  ಮಾಧ್ಯಮಿಕ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಮಕ್ಕಳ ನಾಟಕೋತ್ಸವ ಹಾಗೂ ಜಾನಪದ ನೃತ್ಯ ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಮಕ್ಕಳು ತಮ್ಮ ಬಾಲ್ಯದಲ್ಲಿಯೇ ಕಲೆಗಳನ್ನು ಮೈಗೂಡಿಸಿಕೊಳ್ಳುವತ್ತಾ ಮುಂದಾಬೇಕು ಎಂದು ತಿಳಿಸಿದರು.
ಮಕ್ಕಳಲ್ಲಿ ಹುದುಗಿರುವ ಕಲೆಯನ್ನು ಹೊರಸೂಸಲು ವೇದಿಕೆ ಅಗತ್ಯವಿದ್ದು, ಅದನ್ನು ಸಾಂಸ್ಕೃತಿಕ ಸಂಘಟನೆಗಳು ಕಲೆಯನ್ನು ಹೊರತರುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು.
ಪಟ್ಟಣದಲ್ಲಿ ಕಲಾ ಪ್ರದರ್ಶನಕ್ಕೆ ಕಲಾವೇದಿಕೆ ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ಕಲಾ ವೇದಿಕೆ ನಿರ್ಮಿಸುವಲ್ಲಿ ಮುಂದಾಗಲಾಗುವುದು ಎಂದು ತಿಳಿಸಿದರು.  
ಬೆಂಗಳೂರಿನ ರಾಷ್ಟ್ರೀಯ ನಾಟಕ ಶಾಲೆ ನಿರ್ದೇಶಕ ಚಿದಂಬರರಾವ್ ಜಂಬೆ ಅವರು ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಡಾ. ನಾಗೇಶ್, ತಾಲೂಕು ಕಸಾಪ ಅಧ್ಯಕ್ಷ ಎಚ್.ಎನ್. ಲೋಕೇಶ್, ಪ್ರತಿಮಾ ಟ್ರಸ್ಟ್ ಅಧ್ಯಕ್ಷ ಉಮೇಶ್ ಸಂಕನಹಳ್ಳಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.