ಹಾಸನ

ಸಾಮಾಜಿಕ ಪರಿವರ್ತನೆಗೆ ಮಾನ್ಯತೆ ನೀಡಿ

Published On :

ಬೇಲೂರು: ಸಾಮಾಜಿಕ ನ್ಯಾಯ ಪಾಲಿಸಿದ್ದೇವೆ ಎಂದು ಹೇಳುವ ರಾಜಕೀಯ ಪಕ್ಷಗಳು  ಹಾಗೆ ಹೇಳುವ ಬದಲು, ಸಾಮಾಜಿಕ ಪರಿವರ್ತನೆಗೆ ರಾಜಕೀಯ ಪಕ್ಷಗಳು ಹೆಚ್ಚು ಮಾನ್ಯತೆ ನೀಡಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯೆ ಪದ್ಮಾಕ್ಷಿ ಸತ್ಯನಾರಾಯಣ್ ಹೇಳಿದ್ದಾರೆ.
ತಾಲೂಕಿನ ಚೀಕನಹಳ್ಳಿಯ ಹುನಗನಹಳ್ಳಿ ಗ್ರಾಮ ಪಂಚಾಯಿತಿ ಅವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ ಸಮಾಜಕ್ಕೆ ಪ್ರತಿಬಿಂಬ ಎಂದ ಅವರು, ಈ ಕಾರಣದಿಂದ ಮನುವಾದ ವಿರುದ್ಧ ಹೋರಾಟ ಮಾಡಿದ ಈ ಮಹನೀಯರು ಜಾತಿ, ವರ್ಗ ಹಾಗೂ ಧರ್ಮಗಳ ಅಸಮತೋಲನದ ಬಗ್ಗೆ ಹೋರಾಟ ಮಾಡಿದವರು ಇವರ ಆದರ್ಶ ಹಾಗೂ ತತ್ವಗಳು ಇಂದಿಗೂ ಜೀವಂತವಾಗಿದೆ ಎಂದರು. ಸರ್ಕಾರ ಮತ್ತು ಸಂಬಂಧ ಪಟ್ಟ ಇಲಾಖೆಯವರು ಸಮಾಜ ಸುಧಾರಕರ ತತ್ವ- ಚಿಂತನೆಗಳನ್ನು ಮಕ್ಕಳಿಗೆ ತಿಳಿಸಿ ಅವರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಅಗತ್ಯವಿದ್ದಾಗ ದಲಿತರ ನೆನಪು: ನಂತರ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಲ್ಲೇಶ್ ಅಂಬುಗೆ ಸ್ವಾತಂತ್ರ್ಯಾ ನಂತರದ ದಲಿತ ಚಳುವಳಿಗಳು ಸಮಾಜದಲ್ಲಿನ ಶೋಷಣೆ ವಿರುದ್ಧ ಹೋರಾಟ ಮಾಡಿದ್ದರು. ಕೂಡ ಇಂದಿಗೂ ಶೋಷಣೆ ಜೀವಂತವಾಗಿದೆ. ಕಾರಣ ರಾಜಕೀಯ ಪಕ್ಷಗಳ ಕುತಂತ್ರವೆಂದ ಅವರು ಚುನಾವಣೆ ಸಂದರ್ಭದಲ್ಲಿ ಮಾತ್ರ ದೀನ ದಲಿತರ ನೆನಪು ಮಾಡಿಕೊಳ್ಳುತ್ತಾರೆ ಎಂದರು.
ಸಂಘಟಿತರಾಗಬೇಕು: ಬಾಬಾ ಸಾಹೇಬ್ ಅಂಬೇಡ್ಕರ್ ಬದುಕು- ಬರಹ ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವನ್ನು ಸಂಘಟನೆಗಳು ಚಾಲನೆ ನೀಡಬೇಕು ಹಾಗೂ ಯುವಕರು ಹೆಚ್ಚು ಹೆಚ್ಚು ಅಂಬೇಡ್ಕರ್ ಅವರ ಪುಸ್ತಕಗಳನ್ನು ಓದುವುದರ ಮೂಲಕ ಅಂಬೇಡ್ಕರ್ ಅವರ ವಿಚಾರಗಳನ್ನು ತಿಳಿದುಕೊಂಡು ಅವರ ತತ್ವ- ಆದರ್ಶಗಳನ್ನು ಪಾಲಿಸುವ ಮೂಲಕ ಸಂಘಟಿತರಾಗಬೇಕು ಎಂದರು.
ನಂತರ ಮಾತನಾಡಿದ ದಲಿತ ಸಂಘರ್ಷ ಸಮಿತಿ ಗೌರವಾಧ್ಯಕ್ಷ ಕೆ. ಸುದರ್ಶನ್ ಕೆಲ ದಲಿತ ಸಂಘಟನೆಗಳ ಮುಖಂಡರು ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಳ್ಳುವುದು ಅವರ ವೈಯಕ್ತಿಕ ವಿಷಯ. ಆದರೆ, ಸಂಘಟನೆಯನ್ನು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡುವುದು ತಪ್ಪು ಎಂದ ಅವರು ಜನಪರ ಸಂಘಟನೆಗಳು ರಾಜಕೀಯ ಹಿತಾಶಕ್ತಿಯಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತೆ ತಿಳಿಸಿದ ಅವರು, ಪ್ರತಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಇರುವ ಗಣ್ಯರಿಗೆ ಅಂಬೇಡ್ಕರ್, ಬುದ್ಧ, ಬಸವ ಚಿಂತನೆ ಪುಸ್ತಕಗಳನ್ನು ಉಚಿತವಾಗಿ ನೀಡುವ ಭರವಸೆ ನೀಡಿದರು.
ತಾಲೂಕು ಪ್ರಧಾನ ಸಂಚಾಲಕ ಬಿ.ಎಲ್. ಲಕ್ಷ್ಮಣ್ ಮಾತನಾಡಿ, ಸಂಘಟನೆಗಳನ್ನು ಕಟ್ಟವದು ಬಹು ಕಷ್ಟದ ವಿಷಯವಾಗಿದೆ. ಕಾರಣ ಸಂಘಟನೆಯಲ್ಲಿ ಭಾಗಿಯಾಗಿರುವ ಜನರು ತತ್ವ- ಸಿದ್ಧಾಂತಗಳಿಗೆ ಬದ್ಧವಾಗಿ ಕೆಲಸ ಮಾಡಬೇಕು. ಅದರಲ್ಲೂ ಮಲೆನಾಡು ಪ್ರದೇಶದಲ್ಲಿ ಸಂಘಟನೆ ಅಗತ್ಯವಿದ್ದು, ಸುಮಾರು 12 ಗ್ರಾಮಗಳು ಸೇರಿ ಸಂಘಟನೆ ಆರಂಭ ಮಾಡಿದ್ದು, ಮುಂದಿನ ದಿನಗಳಲ್ಲಿ ಸಂಘಟನೆ ಜನಪರ ಮತ್ತು ಸಮಾಜ ಮುಖಿಯಾಗಿ ಕೆಲಸ ಮಾಡಿ ಜನರ ಮೆಚ್ಚುಗೆ ಪಡೆಯಲಿ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.