ಹಾಸನ

ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಸಿಇಟಿ ತರಬೇತಿ

Published On :

ಅರಕಲಗೂಡು: ದ್ವಿತೀಯ ಪಿಯುಸಿ ನಂತರದ ಉನ್ನತ ಶಿಕ್ಷಣ ಪ್ರವೇಶಕ್ಕಾಗಿ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಪಟ್ಟಣದ ಹಾಸನ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಒಂದು ತಿಂಗಳು ಕಾಲ ಸಿ.ಇ.ಟಿ. ತರಬೇತಿ ನೀಡಿ ಸಜ್ಜುಗೊಳಿಸಿದೆ.
ಬೆಂಗಳೂರು, ಮೈಸೂರು- ಮಂಗಳೂರಿನಂತಹ ನಗರ ಪ್ರದೇಶ ಗಳಲ್ಲಿನ ಬಹುತೇಕ ವಿದ್ಯಾರ್ಥಿಗಳಿಗೆ ಮಾತ್ರವೇ ಸೀಮಿತ ಎಂಬಂತಿದ್ದ ಸಿ.ಇ.ಟಿ. ತರಬೇತಿಯನ್ನು ಗ್ರಾಮೀಣ ಭಾಗದ ಮಕ್ಕಳಿಗೂ ಒದಗಿಸುವ ಸದುದ್ದೇಶದಿಂದ ಇದೇ ಮೊದಲ ಬಾರಿಗೆ ರಾಜ್ಯದ ಹಲವು ಪ್ರತಿಷ್ಠಿತ ಕಾಲೇಜುಗಳ ನುರಿತ ಉಪನ್ಯಾಸಕರನ್ನು ಕರೆತಂದು ಪಿಯುಸಿ ನಂತ ರದ ಇಂಜಿನಿಯರಿಂಗ್, ವೈದ್ಯಕೀಯ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಸಿ.ಇ.ಟಿ. ಪರೀಕ್ಷೆ ತೆಗೆದುಕೊಳ್ಳಲು ಅನುಕೂಲವಾಗುವಂತೆ 50ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತರಬೇತಿ ಸೌಲಭ್ಯ ನೀಡಲಾಗಿದೆ.
ರಾಸಾಯನಶಾಸ್ತ್ರ ವಿಷಯದಲ್ಲಿ ಉಪನ್ಯಾಸಕ ಹನುಮಂತರಾವ್, ಪ್ರದೀಪ್ ಕುಮಾರ್, ಭೌತಶಾಸ್ತ್ರದಲ್ಲಿ ರಾಜೇಶ್, ಗಂಗಾಧರ್, ಸಂತೋಷ್, ಗಣಿತಶಾಸ್ತ್ರದಲ್ಲಿ ಸತೀಶ್, ದೀಪಕ್, ನವೀನ್ ಹಾಗೂ ಜೀವಶಾಸ್ತ್ರ ವಿಷಯದಲ್ಲಿ ಸುರೇಂದ್ರ ಕುಮಾರ್ ಮತ್ತು ವೇದಮೂರ್ತಿ ಶಿಬಿರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ತರಬೇತಿ ನೀಡಿದ ಪ್ರಮುಖರು. ಒಂದು ತಿಂಗಳ ಕಾಲ ಸಿ.ಇ.ಟಿ. ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರವೇಶ  ಪತ್ರ ನೀಡಿದರು. ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಕೆ. ಗಂಗಾಧರ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಉಪ ಯೋಗ ಕಲ್ಪಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಸಿ.ಇ.ಟಿ. ತರಬೇತಿ ಶಿಬಿರ ನೀಡಲಾಗಿದೆ. ಕಾಲೇಜು ಪ್ರಾಂಶುಪಾಲ ಪಿ. ನವೀನ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಪ್ರದೀಪ್ ಉದ್ಘಾಟಿಸಿದರು. ಆಲೂರು ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹನುಮಂತರಾವ್, ವೇದಮೂರ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.