ಹಾಸನ

ಆಕಸ್ಮಿಕ ಬೆಂಕಿಗೆ 25 ಗುಡಿಸಲು ಭಸ್ಮ

Published On :

ಕ.ಪ್ರ. ವಾರ್ತೆ ಟಿ ಜಾವಗಲ್ ಟಿ ಏ. 28 :ಜಾವಗಲ್‌ನ ಖಲಂದರ್ ನಗರದ ಹಿಂಭಾಗದ ಹೌಸಿಂಗ್ ಬೋರ್ಡ್ ಜಾಗದಲ್ಲಿ ಈಚೆಗೆ ಸುಮಾರು 25ಕ್ಕೂ ಹೆಚ್ಚು ಗುಡಿಸಲುಗಳನ್ನು ಹಾಕಿ ಕೊಂಡಿದ್ದು, ಭಾನುವಾರ ರಾತ್ರಿ ಆಕಸ್ಮಿಕ ಬೆಂಕಿಗೆ ಆಗುಡಿಸಲುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ.
ಈ ಗುಡಿಸಿಲಿನ ಮೇಲ್ಭಾಗದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿದೆ. ಈ ಅವಗಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೆ ತಹಸೀಲ್ದಾರ್ ನಟರಾಜು, ಡಿವೈಎಸ್‌ಪಿ ಮಂಜುನಾಥ್ ನಾಯಕ್, ತಾಪಂ ಇಒ ಮೂರ್ತಿ, ಸಿಪಿಐ ಪರಶಿವಮೂರ್ತಿ, ಎಸ್‌ಐ ನವೀನ್, ಗ್ರಾಪಂ ಮಾಜಿ ಸದಸ್ಯ ನರಸಿಂಹಸ್ವಾಮಿ ಸ್ಥಳಕ್ಕೆ ಭೇಟಿ ನೀಡಿದ್ದರು.
ಸೋಮವಾರ ಬೆಳಿಗ್ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಹಳ್ಳಿ ನಾಗರಾಜು, ಜಿಲ್ಲಾ ಸೇವಾದಳ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠಯ್ಯ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿಜಯ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಬೆಳುವಳ್ಳಿ ಮಹದೇವ್ ಅವರುಗಳು ಸ್ಥಳಕ್ಕೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ರಾಜಶೇಖರ್ ಸ್ಥಳಕ್ಕೆ ಭೇಟಿ ನೀಡಿ, ಗುಡಿಸಿಲಿಗೆ ಬೆಂಕಿ ಬಿದ್ದಿದ್ದರಿಂದ ಗುಡಿಸಲು ಕಳೆದು ಕೊಂಡವರಿಗೆ ನಿವೇಶನ ನೀಡುವಂತೆ ಪಂಚಾಯಿತಿವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ಜೆಕೆ ಸಿದ್ದೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಧನಂಜಯ, ಸದಸ್ಯ ಶ್ರೀನಿವಾಸ, ಮಾಜಿ ಸದಸ್ಯ ಈರೇಗೌಡ, ಕೊಲ್ಲಾರ ಶೆಟ್ಟಿ, ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ತಿಮ್ಮೇಗೌಡ, ಡಿಎಸ್‌ಎಸ್ ಮುಖಂಡ ಲಕ್ಷ್ಮೀ ನಾರಾಯಣ, ಫಿರೋಜ್ ಗಾಂಧಿ, ಶಂಕರನಹಳ್ಳಿ ಪ್ರಭಾಕರ, ಸನಾ, ಕರವೇ ಅಧ್ಯಕ್ಷ ದಯಾನಂದ, ಭಾನು ಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.