ಹಾಸನ

ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕ್ರಮ

Published On :

ಕನ್ನಡಪ್ರಭ ವಾರ್ತೆ ಟಿ ಹಾಸನ ಟಿ ಏ. 28
ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಅವರು ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಣ್ಣು ಪರೀಕ್ಷೆಗಳು, ಬೀಜ ಪರೀಕ್ಷೆಗಳು ಸಮರ್ಪಕವಾಗಿ ನಡೆಯಬೇಕು. ಗೊಬ್ಬರ ದಾಸ್ತಾನು ಸಮಸ್ಯೆಗಳನ್ನು ನಿಭಾಯಿಸುವ ಸಲುವಾಗಿ  ಸಹಕಾರ ಸಂಘಗಳನ್ನು ಬಲಪಡಿಸಲು ಪ್ರಯತ್ನಿಸಿ ಎಂದು ಸೂಚಿಸಿದರು.
ಯಾರೂ ರಸಗೊಬ್ಬರದ ನಿಗದಿತ ಬೆಲೆಗಿಂತ ಹೆಚ್ಚಿನ ಹಣಕ್ಕೆ ಮಾರುವಂತಿಲ್ಲ. ಪರವಾನಗಿ ಪಡೆದ ಸಗಟು ಮಾರಾಟಗಾರರು ಅನುಮತಿ ಪಡೆದಿರುವ ಸ್ಥಳಗಳಲ್ಲಿ ಮಾತ್ರ ಗೊಬ್ಬರ ದಾಸ್ತಾನು ಮಾಡಿ, ಮಾರಾಟ ಮಾಡಬೇಕು. ಗೊಬ್ಬರಕ್ಕಾಗಿ ರೈತರು ಪರದಾಡುವಂತಾಗಬಾರದು. ಗ್ರಾಮೀಣ ಪ್ರದೇಶಗಳಿಗೆ ಸಾಧ್ಯವಾದಷ್ಟು ಹೆಚ್ಚಿನ ಪ್ರಮಾಣದ ರಸಗೊಬ್ಬರ ಪೂರೈಕೆ ಮಾಡಬೇಕು. ರೈತರು ಗೊಬ್ಬರಕ್ಕಾಗಿ ತಾಲೂಕು ಕೇಂದ್ರಗಳಿಗೆ ಬರುವುದನ್ನು ನಿಲ್ಲಿಸಬೇಕು ಎಂದು ಅವರು ನಿರ್ದೇಶನ ನೀಡಿದರು.  
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾದಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಉಪಸ್ಥಿತರಿದ್ದರು. ಕೃಷಿ ಇಲಾಖೆ ಅಧಿಕಾರಿಗಳು ಉಗ್ರಾಣ ನಿಗಮದ ವ್ಯವಸ್ಥಾಪಕರು, ಲಾರಿ ಮಾಲೀಕರ ಸಂಘದ ಅಧ್ಯಕ್ಷರು, ಕೂಲಿ ಕಾರ್ಮಿಕರ ಸಂಘ, ಕೆಎಸ್‌ಸಿಎಂಎಫ್ ವ್ಯವಸ್ಥಾಪಕರು, ಇಫ್ಕೋ, ಕ್ರಿಬ್ಕೋ, ಕೀಟನಾಶಕ ಮತ್ತು ಬಿತ್ತನೆ ಬೀಜ ಮಾಲೀಕರ ಸಂಘದ ಅಧ್ಯಕ್ಷರು, ಸಹಕಾರ ಸಂಘಗಳ ಉಪನಿಬಂಧಕರು ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.