ಹಾಸನ

ಯಗಚಿ ಕಾಮಗಾರಿ ಪೂರ್ಣಗೊಳಿಸಿ

Published On :

ಕ.ಪ್ರ. ವಾರ್ತೆ ಟಿ ಹಾಸನ ಟಿ ಏ. 28 : ಯಗಜಿ ಏತ ನೀರಾವರಿ ಪೂರ್ಣಗೊಳಿಸಿ ಮಾದಹಳ್ಳಿ ಹಾಗೂ ಇತರೆ ಹಳ್ಳಿಗೆ ಕುಡಿಯುವ ನೀರನ್ನು ಒದಗಿಸುವಂತೆ ಒತ್ತಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ರೈತರು ಸಂಘಟನೆಯವರು ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್‌ಗೆ ಈ ಬಗ್ಗೆ ಮನವಿ ಮಾಡಿದರು. ಕಳೆದ ಜನವರಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಅಧಿಕಾರಿಗಳು, ರೈತರು ಹಾಗೂ ಗ್ರಾಮಸ್ಥರೊಂದಿಗೆ ಸಭೆಯನ್ನು ನಡೆಸಿ ಮಾ. 30ರೊಳಗೆ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಿ ನೀರು ಹರಿಸುವುದಾಗಿ ಭರವಸೆ ನೀಡಿದ್ದರು.
ಆರೋಪ: ಕನಿಷ್ಟ ಮಾದಿಹಳ್ಳಿಗಾದರೂ ನೀರು ಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಆಶ್ವಾಸನೆಯ ಗಡುವು ಕಳೆದು ಹಲವಾರು ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ರೈತರು ಆರೋಪಿಸಿದರು.
ಪೂರ್ಣಗೊಂಡಿಲ್ಲ: ಯಗಚಿ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಭಾವನೆ ತಾಳಿದ್ದು, ಈ ಹಿಂದೆ ಆದೇಶದಂತೆ ಕೆಲಸ ಮಾಡಲಾಗುತ್ತಿಲ್ಲ. ನಿಗದಿಗೊಳಿಸದ ದಿನದೊಳಗೆ ಪೂರ್ಣಗೊಳುವುದಾಗಿ ಹೇಳಿ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ದೂರಿದರು.
ಆಕ್ರೋಶ: ಹಳೇಬೀಡು ಮತ್ತು ಮಾದೀಹಳ್ಳಿ ಏತ ನೀರಾವರಿ ಕಾಮಗಾರಿಯು ಜಿಲ್ಲಾಧಿಕಾರಿಗಳ ಆದೇಶದಂತೆ ಸಮರ್ಪಕವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸುತ್ತಿಲ್ಲ. ಕೆಲಸದ ವಿಳಂಬದ ಬಗ್ಗೆ ಸಂಪೂರ್ಣ ಚಿತ್ರಣವನ್ನು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಮುಂದೆ ಇಟ್ಟರು. ಹಿಂದೆ ರೈತರೊಂದಿಗೆ ಸಭೆ ನಡೆಸಿ ಕೈಗೊಂಡಂತಹ ತೀರ್ಮಾನದಂತೆ ಯಾವ ಕೆಲಸಗಳು ಪೂರ್ಣ ಮಾಡುತ್ತಿಲ್ಲ. ಅಧಿಕಾರಿಗಳು ಕಾಮಗಾರಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಕ್ಕೆ ಶೇ. 50ರಷ್ಟು ಭಾಗ ಮಾತ್ರ ಕೆಲಸ ನಡೆದಿದ್ದು, ಇತರೆ ಕೆಲಸಗಳು ಆಮೆ ನಡೆಯಲ್ಲಿ ಮಾಡಲಾಗುತ್ತಿದೆ. ಕೆಲವು ಕಡೆಗಳಲ್ಲಿ ಭೂ ಸ್ವಾಧೀನ ಮಾಡಿಲ್ಲ. ಅಧಿಕಾರಿಗಳು ಕೇವಲ ಕುಂಟು ನೆಪವನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ತಾಲೂಕ ಸಂಘಟನಾ ಕಾರ್ಯದರ್ಶಿ ಬೆಳ್ಳೂರು ಸ್ವಾಮಿಗೌಡ, ಚನ್ನೇಗೌಡ, ಶಿವಪ್ಪ ಹಾಗೂ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.